ಬೆಂಗಳೂರು: ಆಗಸ್ಟ್ 13ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಕನ್ನಡ ಭವನದ "ನಯನ"ದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ಐವರು ಹಿರಿಯ ಸಾಹಿತಿಗಳ ಮಹತ್ವದ 11 ಸಂಪುಟಗಳ ಬಿಡುಗಡೆ ಸಮಾರಂಭವನ್ನು ಏರ್ಪಡಿಸಲಾಗಿದೆ.
ಕೊಪ್ಪಳದ ಹಿರಿಯ ಹೆಸರಾಂತ ಸಾಹಿತಿಗಳಾದ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಅವರು ಪುಸ್ತಕಗಳನ್ನು ಬಿಡುಗಡೆ ಮಾಡುತ್ತಾರೆ. ಹಿರಿಯ ಸಾಹಿತಿ ಶ್ರೀಮತಿ ಸಾವಿತ್ರಿ ಮುಜಮದಾರ ಅವರು ಕೃತಿ ಕುರಿತು ಮಾತನಾಡುತ್ತಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ಕೆ ಎಂ ಗಾಯತ್ರಿ ಅವರು ಮುಖ್ಯ ಅತಿಥಿಯಾಗಿರುತ್ತಾರೆ.
ಸಂಪುಟಗಳ ಸಂಪಾದಕರು, ಬಿಡುಗಡೆಯಾಗಲಿರುವ ಪುಸ್ತಕಗಳ ಲೇಖಕರುಗಳ ಸಂಬಂಧಿಕರೂ ಭಾಗವಹಿಸಲಿದ್ದಾರೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಪುಸ್ತಕ ಪ್ರೇಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಆಹ್ವಾನಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ