ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟ

Chandrashekhara Kulamarva
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ಪ್ರಯುಕ್ತ ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.


ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಅವರ ಚಿತ್ರ ಪ್ರಥಮ ಸ್ಥಾನ ಪಡೆದಿದೆ. ಮೈಸೂರಿನ ಕನ್ನಡಪ್ರಭ ಪತ್ರಿಕೆಯ ಛಾಯಾಗ್ರಾಹಕ  ಎಂ.ಎಸ್. ಬಸವಣ್ಣ ಅವರು ದ್ವಿತೀಯ, ಮೈಸೂರಿನ ದ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರಿನ್ಸಿಪಾಲ್ ಫೋಟೋಗ್ರಾಪರ್ ಉದಯಶಂಕರ್ ಅವರು ತೃತೀಯ ಪಡೆದುಕೊಂಡಿದ್ದಾರೆ.



ಬೆಂಗಳೂರಿನ ಪ್ರಜಾವಾಣಿಯ ಹಿರಿಯ ಛಾಯಾಗ್ರಾಹಕ ಎಂ.ಎಸ್. ಮಂಜುನಾಥ್  ಮತ್ತು ಇಂದ್ರಕುಮಾರ್ ದಸ್ತೇನವರ ಚಿತ್ರ ತೀರ್ಪುಗಾರರ ಮೆಚ್ಚುಗೆಯ ಬಹುಮಾನಕ್ಕೆ ಪಾತ್ರವಾಗಿದೆ.


ಇಂದು ಬಹುಮಾನ ವಿತರಣೆ: ಆ.6ರಂದು (ಇಂದು) ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. 


ಪ್ರಶಸ್ತಿ ವಿವರ: ಸುದ್ದಿ ಚಿತ್ರ ವಿಭಾಗದಲ್ಲಿ ಸ್ಪರ್ಧೆಗೆ ಛಾಯಾಚಿತ್ರ ಆಹ್ವಾನಿಸಲಾಗಿದ್ದು, ಪ್ರಥಮ ಬಹುಮಾನ 10 ಸಾವಿರ ರೂ. ಮತ್ತು ನಗದು ಫಲಕ, ದ್ವಿತೀಯ ಬಹುಮಾನ 5 ಸಾವಿರ ರೂ. ನಗದು ಮತ್ತು ಫಲಕ ಹಾಗೂ ತೃತೀಯ ಬಹುಮಾನ3 ಸಾವಿರ ರೂ. ನಗದು ಮತ್ತು ಫಲಕ ನೀಡಲಾಗುವುದು ಛಾಯಾಚಿತ್ರ ಸ್ಪರ್ಧಾ ವಿಭಾಗದ ಸಂಚಾಲಕ ಸತೀಶ್ ಇರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top