ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಮೇಶ್ವರ ಒಕ್ಕೂಟದ ವಾರ್ಷಿಕೋತ್ಸವ

Chandrashekhara Kulamarva
0

ವೀರೇಂದ್ರ ಹೆಗ್ಗಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿ: ಕೃಷ್ಣಯ್ಯ ಬಲ್ಲಾಳ್ 





ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುವ ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿಯಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶದ  ಜನರು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತೆ ಮಾಡಿ ಸುಭಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತ್ತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದ್ದು, ಹೆಗ್ಗಡೆ ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಪ್ರಯತ್ನಿಸುವವರ ವಿರುದ್ದ ನಾವು ಸೆಟದು ನಿಲ್ಲಬೇಕು ಎಂದು ವಿಟ್ಲ ವಲಯ ಜನಜಾಗ್ರತಿ ವೇದಿಕೆ ಅಧ್ಯಕ್ಷ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ಹೇಳಿದರು.


ಅವರು ಭಾನುವಾರ ಬೊಳಂತಿಮೊಗೇರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಗ್ರಾಮಾಭಿವೃದ್ಧಿ ಯೋಜನೆಯ ಮಾಮೇಶ್ವರ ಒಕ್ಕೂಟದ ಅಧ್ಯಕ್ಷ ಹರೀಶ್ ಮಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆ  ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಯೋಜನೆ ಬಂಟ್ವಾಳ ತಾಲೂಕಿನಲ್ಲಿ ಪ್ರಾರಂಭವಾಗಿ 20 ವರ್ಷಗಳಲ್ಲಿ ಮಾಡಿದ ಕಾರ್ಯ ಸಾಧನೆ ಹಾಗೂ ಯೋಜನೆ ಮೂಲಕ ಸಮುದಾಯಕ್ಕೆ ನೀಡಿದ ಸಹಕಾರವನ್ನು ಸದಸ್ಯರುಗಳಿಗೆ ಮತ್ತೊಮ್ಮೆ ನೆನಪಿಸಿದರು.


ಈ ಸಂದರ್ಭದಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿರುವ  ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿ ಗಳನ್ನು ಗುರುತಿಸಿ ಗೌರವಿಸಿ ಪರಿಸರ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರತಿಯೊಬ್ಬರಿಗೂ ಸಸಿ ವಿತರಿಸಲಾಯಿತು. ಎಸ್ ಎಸ್ ಎಲ್ ಸಿ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳನ್ನು ಗುರುತಿಸಿ ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ಭಜನಾ ಕಾರ್ಯಕ್ರಮ ಜರಗಿತು.


ಕಾರ್ಯಕ್ರಮದ ವೇದಿಕೆಯಲ್ಲಿ ವಿಟ್ಲ ಪಟ್ಟಣ  ಪಂಚಾಯಿತಿ ಅಧ್ಯಕ್ಷ ಕರುಣಾಕರ ಗೌಡ, ಸದಸ್ಯರುಗಳಾದ ಚಂದ್ರಶೇಖರ್ ಗೌಡ ಕೆಲಿಂಜ, ಅಬ್ದುಲ್ ರೆಹಿಮಾನ್, ಯೋಜನೆಯ ವಲಯ ಅಧ್ಯಕ್ಷೆ ತುಳಸಿ, ಮಾಮೇಶ್ವರ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷ ವೀರಪ್ಪಗೌಡ, ವಿಟ್ಲ ತಾಲೂಕು ಭಜನಾ ಪರಿಷತ್ ಕೋಶಾಧಿಕಾರಿ ಜಯರಾಮ್ ರೈ, ಊರಿನ ಗುರಿಕಾರ ರಾಘವ ಗೌಡ ಅಡ್ಡಳ್ಳಿ, ಕೆಲಿಂಜ ಒಕ್ಕೂಟದ ಅಧ್ಯಕ್ಷ  ದಯಾನಂದ, ಬೋಳಂತೂರು ಒಕ್ಕೂಟದ ಅಧ್ಯಕ್ಷ ಸೀತಾ, ಗೋಳ್ತಮಜಲ್ ಸಿ ಒಕ್ಕೂಟದ ಅಧ್ಯಕ್ಷ ಮಮತಾ, ಒಕ್ಕೂಟದ ಪದಾಧಿಕಾರಿಗಳಾದ ಪುರಂದರ, ಯಶೋದ, ಮೀನಾಕ್ಷಿ ರಮೇಶ್ ಗೌಡ,ದಿವಾಕರ ಶೆಟ್ಟಿ, ಗಣೇಶ, ಪುರಂದರ ಗೌಡ ರಮೀಜಾ ಮೊದಲಾದವರು ಉಪಸ್ಥಿತರಿದ್ದರು.


ಕಲ್ಲಡ್ಕ ವಲಯ ಮೇಲ್ವಿಚಾರಕ ಸುಕರಾಜ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಯಶೋದಾ ವರದಿ ವಾಚಿಸಿ, ಪುರಂದರ ಗೌಡ ವಂದಿಸಿದರು. ಹರೀಶ್ ಎಸ್ ಪಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top