ಕನ್ನಡ ಶಾಲೆಗಳ ಆಧುನೀಕರಣಕ್ಕೆ ಸೇವಾ ಸಂಸ್ಥೆಗಳ ಸ್ಪಂದನ ಅಗತ್ಯ

Upayuktha
0


ಸುರತ್ಕಲ್‌: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಆಧುನೀಕರಣದ ಅವಶ್ಯಕತೆಗಳಿಗೆ ಸೇವಾ ಸಂಸ್ಥೆಗಳು ಸ್ಪಂದಿಸಬೇಕಾಗಿದೆ. ವಿದ್ಯಾರ್ಥಿಗಳು ಚಟುವಟಿಕೆಗಳನ್ನು ಆಡುತ್ತ ಕಲಿಯುತ್ತಾರೆ. ಕಲಿಕೆ ಎಂಬುದು ಆಸಕ್ತಿ ಮತ್ತು ಲವಲವಿಕೆಯ ಪ್ರಕ್ರಿಯೆಯಾಗಿದೆ ಎಂದು ಕಲಿಕಾ ಸಂಪನ್ಮೂಲ ವ್ಯಕ್ತಿ ಮತ್ತು ಆರ್.ಟಿ. ಎಜುಸ್ಕಿಲ್ಸ್ ನ ಮುಖ್ಯಸ್ಥೆ ಕ್ಲೀಟಾ ಡಿ'ಸೋಜಾ ನುಡಿದರು.


ಅವರು ಸುರತ್ಕಲ್‌ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುರತ್ಕಲ್ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಸಂಸ್ಥೆಯ ವತಿಯಿಂದ ಪ್ರಿಂಟರ್ ಮತ್ತು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್‌ಗಳನ್ನು ಕೊಡುಗೆಯಾಗಿ ನೀಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ರೋಟರಿ ಕ್ಲಬ್ ಕಾರ್ಯದರ್ಶಿ ರಾಮ್ ಮೋಹನ್ ವೈ. ಅವರು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವಲ್ಲಿ ಸಂಘಟಿತ ಪ್ರಯತ್ನ ಅಗತ್ಯ ಎಂದರು.


ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್ ಅವರು ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕ್ರಿಯಾಶೀಲಾ ವ್ಯಕ್ತಿತ್ವ ಹೊಂದಿದವರಾಗಿದ್ದು ಚಟುವಟಿಕೆ ಆಧಾರಿತ ಕಲಿಕೆ ಅಗತ್ಯ ಎಂದರು.


ರೋಟರಿ ಕ್ಲಬ್ ಸೇವಾ ನಿರ್ದೇಶಕ ಕೃಷ್ಣ ಮೂರ್ತಿ ಮತ್ತು ಕೋಶಾಧಿಕಾರಿ ಮೋಹನ್ ಎಚ್. ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಜಯಂತಿ ಕೃತಜ್ಞತೆ ಸಲ್ಲಿಸಿದರು. ಕ್ಲೀಟಾ ಡಿ'ಸೋಜಾ ಅವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top