ಉಡುಪಿ: ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ಜೀವನ ಕೌಶಲ್ಯಗಳ ಕುರಿತ ಅಧಿವೇಶನ

Upayuktha
0



ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ಆಗಸ್ಟ್ 20, 2025 ರಂದು “ಜೀವನ ಕೌಶಲ್ಯಗಳು” ಕುರಿತು ವಿಶೇಷ ಅಧಿವೇಶನವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಟಿ. ಮೋಹನ್‌ದಾಸ್ ಪೈ ಪ್ಲಾಟಿನಮ್ ಜುಬಿಲಿ ಬ್ಲಾಕ್‌ನ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರೋಟರಿಯನ್ ಪಿ.ಎಚ್.ಎಫ್. ರೇನು ಜಯರಾಮ್, ಮಣಿಪಾಲ ಮೂಲದ ಪ್ರಸಿದ್ಧ ಸಾಮಾಜಿಕ ಉದ್ಯಮಿ ಹಾಗೂ “ಕ್ರಾಫ್ಟ್ಸ್ ಮಂತ್ರ” ಸಂಸ್ಥಾಪಕರಾಗಿ ಹಾಜರಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.


ತಮ್ಮ ಉಪನ್ಯಾಸದಲ್ಲಿ ಅವರು ಜೀವನದಲ್ಲಿ ಅಗತ್ಯವಿರುವ ವಿಭಿನ್ನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯತೆಯನ್ನು ತಿಳಿಸಿದರು. ಸಂವಹನ ಕೌಶಲ್ಯ, ನಾಯಕತ್ವ ಗುಣ, ಸಮಸ್ಯೆ ಪರಿಹಾರ ಸಾಮರ್ಥ್ಯ, ಸೃಜನಾತ್ಮಕ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ಸೊಗಸಾಗಿ ವಿವರಿಸಿದರು.


ರೇನು ಜಯರಾಮ್ ಅವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ವಿಯಾಗಲು ಅಕಾಡೆಮಿಕ್ ಜ್ಞಾನ ಮಾತ್ರ ಸಾಕಾಗುವುದಿಲ್ಲ, ಬದಲಿಗೆ ಸಾಫ್ಟ್ ಸ್ಕಿಲ್ಸ್ ಮತ್ತು ಜೀವನ ಕೌಶಲ್ಯಗಳು ಅಗತ್ಯವೆಂದು ತಿಳಿಸಿದರು. ತಮ್ಮ ಸ್ವಂತ ಜೀವನಾನುಭವಗಳ ಉದಾಹರಣೆಗಳನ್ನು ಹಂಚಿಕೊಂಡ ಅವರು, ಉದ್ಯಮಿತ್ವ, ಸ್ವಾವಲಂಬನೆ ಮತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿಜವಾದ ಜೀವನದ ಅರ್ಥವನ್ನು ಕಂಡುಕೊಳ್ಳಬಹುದು ಎಂದು ಹೇಳಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್ ನಾಯಕ್ ರವರು ಮಾತನಾಡಿ, ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು. ಅಧಿವೇಶನದ ಕೊನೆಯಲ್ಲಿ ವಿದ್ಯಾರ್ಥಿಗಳು ವಿವಿಧ ಪ್ರಶ್ನೆಗಳ ಮೂಲಕ ತಮಗೆ ಬೇಕಾದ ಮಾರ್ಗದರ್ಶನವನ್ನು ಪಡೆದುಕೊಂಡರು.ಕಾರ್ಯಕ್ರಮವನ್ನು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಸಂಸ್ಕೃತಿ ನಿರೂಪಿಸಿದರು.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top