ಶಟಲ್ ಬ್ಯಾಡ್ಮಿಂಟನ್: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕಿಯರ ತಂಡ ಪ್ರಥಮ

Chandrashekhara Kulamarva
0

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ 



ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಅಂಬಿಕಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ಇದರ ಸಹಯೋಗದೊಂದಿಗೆ ಆಫೀಸರ್ ಕ್ಲಬ್ ದರ್ಬೆ ಇಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ  ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ.


ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ನೇಹಶ್ರೀ ಎ, ಪುಲಕಿತ್‌ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಮನ್ವಿತಾ ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಕುಮಾರಿ, ಪವನ್ ಕುಮಾರ್ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top