ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಸುಜ್ಞಾನ ಪಿಯು ಕಾಲೇಜಿನ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ‌ ಆಯ್ಕೆ

Upayuktha
0



ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. 


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲ ರಂಜನ್ ಶೆಟ್ಟಿ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಶ್ರೀಮತಿ ಜಯಲತಾ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top