ಗೀತಗಾಯನ ಸ್ಪರ್ಧೆ: ನಡ ಪಿಯು ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ

Chandrashekhara Kulamarva
0


ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ಬೆಳ್ತಂಗಡಿ ವಲಯ ಮಟ್ಟದ ಗೀತ ಗಾಯನ ಸ್ಪರ್ಧೆಯು ಆಗಸ್ಟ್‌ 24 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.


ರೇಂಜರ್ ವಿಭಾಗದ  ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ಮನ್ವಿತಾ, ಪ್ರಿಯ, ಗಾಯತ್ರಿ, ಸುಶ್ಮಿತಾ, ನವ್ಯಶ್ರೀ ಮತ್ತು ಶ್ರಾವ್ಯ ಭಾಗವಹಿಸಿದ್ದು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.


ರೇಂಜರ್ ಲೀಡರ್ ವಸಂತಿ ಪಿ. ಇವರ ನೇತೃತ್ವದಲ್ಲಿ, ಶ್ರೀಮತಿ ಲಿಲ್ಲಿ ಪಿ.ವಿ. ಇವರ ಮಾರ್ಗದರ್ಶನದಲ್ಲಿ, ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top