ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಪಡ್ನೂರು ಒಕ್ಕೂಟದ ವಾರ್ಷಿಕೋತ್ಸವ

Upayuktha
0


ವಿಟ್ಲ: ವಿಟ್ಲ ಪಡ್ನೂರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಈ ದಿನ ಒಕ್ಕೂಟದ ಅಧ್ಯಕ್ಷೆ ಪ್ರೇಮಲತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಿನಿಲ ಗೋಪಾಲ ಕೃಷ್ಣ ಭಟ್ ಮಾಡಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಉತ್ತಮ ಅಭಿಪ್ರಾಯವನ್ನು ತಿಳಿಸಿದರು.


ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ 2 ರ ನಿರ್ದೇಶಕ ಬಾಬು ನಾಯ್ಕರವರು ಒಕ್ಕೂಟದ ಜವಾಬ್ದಾರಿ ಸಂಘ ನಿರ್ವಹಣೆ ಬ್ಯಾಂಕ್ ವಿಧಿಸುವ ಬಡ್ಡಿ, ಮುಂತಾದ ವಿಚಾರಗಳ ಬಗ್ಗೆ ಮಾರ್ಗದರ್ಶನ ನೀಡಿದರು.


ವೇದಿಕೆಯಲ್ಲಿ ಕಿಶನ್, ಯೋಜನಾಧಿಕಾರಿ ಸುರೇಶ್ ಗೌಡ, ವಿಟ್ಲ ವಲಯದ ವಲಯ ಅಧ್ಯಕ್ಷೆ ಶ್ರೀಮತಿ ಪ್ರಮೀಳಾ, ನಿಕಟ ಪೂರ್ವ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಉತ್ತಮ ಸಂಘ, ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ನಿಕಟ ಪೂರ್ವ ಅಧ್ಯಕ್ಷರುಗಳನ್ನು ಗುರುತಿಸಲಾಯಿತು. ವಿಭಾಗದ ಸಾಧನ ವರದಿಯನ್ನು ಕಾಯದರ್ಶಿ ಹೇಮಲತಾ ಮಂಡಿಸಿದರು. ವಲಯ ಮೇಲ್ವಿಚಾರಕ ಜಗದೀಶ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top