ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ, ಮಂಗಳೂರು, 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15, 2023ರಂದು ಅತ್ಯಂತ ಉತ್ಸಾಹದಿಂದ ಆಚರಿಸಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಗಣ್ಯರು ಭಾಗವಹಿಸಿದ್ದರು. ಕ್ಸೇವಿಯರ್ ಬ್ಲಾಕಿನ ನಿರ್ದೇಶಕರಾದ ಡಾ ಈಶ್ವರ ಭಟ್ ಎಸ್. ಮುಖ್ಯ ಅತಿಥಿಯಾಗಿದ್ದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಏಕತೆಯನ್ನು ಪ್ರದರ್ಶಿಸುವ ಅದ್ಭುತ ಎನ್‌ಸಿಸಿ ಮೆರವಣಿಗೆಯೊಂದಿಗೆ ಪ್ರಾರಂಭವಾಯಿತು. ನಂತರ ಮುಖ್ಯ ಅತಿಥಿಗಳು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿದರು ಮತ್ತು ನೆರದ ಎಲ್ಲರೂ ರಾಷ್ಟ್ರಧ್ವಜಕ್ಕೆ ವಂದನೆನೆಯನ್ನು ಸಲ್ಲಿಸಿದರು.
ಡಾ ಈಶ್ವರ ಭಟ್ 79ನೆಯ ಸ್ವಾತಂತ್ರೋತ್ಸವದ ಸಂದೇಶದ ಮೂಲಕ ಕಳೆದ 78 ವರ್ಷಗಳಲ್ಲಿ ಭಾರತ ಅಭಿವೃದ್ಧಿಯ ಕಡೆಗೆ ಸಾಗಿ ಬಂದ ವಿಚಾರವನ್ನು ತೆರೆದಿಟ್ಟರು. ವೈಜ್ನಾನಿಕವಾಗಿ ಅನೇಕ ಸಾಧನೆಗಳನ್ನು ನಡೆಸುವುದರ ಮೂಲಕ ಸದೃಢವಾಗಿದೆ ಅಂತೆಯೇ ಸಾಂಸ್ಕೃತಿಕ ಪರಂಪರೆ ಹಾಗೂ ವೈದ್ಯಕೀಯ ಕ್ಷೇತ್ರಗಳಲ್ಲೂ ಸಾಕಷ್ಟು ಮುನ್ನಡೆಯನ್ನು ಸಾಧಿಸಿದೆ. ಕೃತಕ ಬುದ್ಧಿಮತ್ತೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಯನ್ನು ವೈಜ್ನಾನಿಕವಾಗಿ ಸಾಧಿಸಲಿದೆ. ಯುವ ವಿದ್ಯಾರ್ಥಿಗಳು ಅನೇಕ ಕನಸುಗಳನ್ನು ಸಾಕಾರಗೊಳಿಸಿ ಭಾರತ ಮಾತೆಗೆ ತಮ್ಮ ಅಮೂಲ್ಯ ಕೊಡುಗೆಯನ್ನು ನೀಡಬೇಕೆಂದರು.
ವಿವಿಯ ಕುಲಪತಿಗಳಾದ ವಂ. ಡಾ. ಪ್ರವೀಣ್ ಮಾರ್ಟಿಸ್ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿಕೊಂಡರು. ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಅಪಾರವಾದ ಗೌರವ ಇರಬೇಕೆಂದರು. ಮತ್ತು ದೇಶ ಕಟ್ಟುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕೆಂದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಡುವ ಮೂಲಕ ಸ್ವಾತಂತ್ರ್ಯೋತ್ಸವಕ್ಕೆ ಮೆರುಗನ್ನು ತಂದುಕೊಟ್ಟರು.
ಬಿಬಿಎ ವಿದ್ಯಾರ್ಥಿ, ಕೆ.ಸಿ. ಕೃಷ್ಣ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


