ರಾಜ್ಯಮಟ್ಟದ ಜಾವೆಲಿನ್ ಸ್ಪರ್ಧೆ; ಸುಜ್ಞಾನ ಪಿಯು ಕಾಲೇಜಿನ ಸಮಿತ್ ಮೂರನೇ ಸ್ಥಾನ

Upayuktha
0


ಕುಂದಾಪುರ: ಉಡುಪಿ ಜಿಲ್ಲೆ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಉಡುಪಿ ಇವರು ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಜೂನಿಯರ್ ಮತ್ತು ಸೀನಿಯರ್-23 ಅಥ್ಲೆಟಿಕ್ ಮೀಟ್-2025ರಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಜಾವೆಲಿನ್ ಎಸೆತದಲ್ಲಿ ಮೂರನೇ ಸ್ಥಾನ ಗಳಿಸಿದ್ದಾನೆ.


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಅರುಣೆ ಮಾನೆ ತರಬೇತಿ ನೀಡಿದ್ದರು.


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top