ರಾಜ್ಯಮಟ್ಟದ ಈಜು ಸ್ಪರ್ಧೆ: ಕಲ್ಲಡ್ಕದ ಇಬ್ಬರು ವಿದ್ಯಾರ್ಥಿನಿಯರಿಗೆ ಚಿನ್ನ, ಬೆಳ್ಳಿಯ ಪದಕ

Upayuktha
0


ಕಲ್ಲಡ್ಕ: ಬೆಂಗಳೂರಿನ ಬನಶಂಕರಿಯ ವಿದ್ಯಾ ಭಾರತಿ ಕರ್ನಾಟಕ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅನರ್ಘ್ಯ ಎ ಆರ್ 400 ಮೀ ಇಂಡಿಜುವಲ್ ಮೆಡ್ಲೆಯಲ್ಲಿ ಚಿನ್ನದ ಪದಕ, 200ಮೀ ಇಂಡಿಜುವಲ್ ಮೆಡ್ಲೆಯಲ್ಲಿ ಬೆಳ್ಳಿಯ ಪದಕ ಮತ್ತು 200ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿಕೆ ನಾಯಕ್ ರವರ ಶಿಷ್ಯೆಯಾಗಿದ್ದು ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತುದಾರ ಲೋಕರಾಜ್ ವಿಟ್ಲ ಮತ್ತು ವಿನೋದ್ ಕಾರವಾರ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.


14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರಾಥಮಿಕ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅನನ್ಯ ಎ.ಆರ್ 200 ಮೀ ಬಟರ್ ಫ್ಲೈ ಬೆಳ್ಳಿಯ ಪದಕ ಮತ್ತು 200 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚಿನ ಪದಕವನ್ನು ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ ಕೆ. ನಾಯಕ್ ಇವರ ಶಿಷ್ಯೆಯಾಗಿದ್ದು ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತುದಾರ ಲೋಕರಾಜ್ ವಿಟ್ಲ ಮತ್ತು ವಿನೋದ್ ಕಾರವಾರ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top