ಸ್ಪರ್ಧಾತ್ಮಕ ಪರೀಕ್ಷೆ ಬರೆದು ಅನುಭವವಿದ್ದರೆ ಸರಕಾರಿ ಉದ್ಯೋಗ ಸುಲಭ: ಸುರೇಶ್ ಎಂ.ಎಸ್

Upayuktha
0




ಸುರತ್ಕಲ್‌: ಸರಕಾರಿ ವಲಯದಲ್ಲಿ ವಿಫುಲ ಉದ್ಯೋಗಾವಕಾಶಗಳು ಲಭ್ಯವಿದ್ದು ವಿದ್ಯಾರ್ಥಿಗಳು ಸೂಕ್ತ ಪೂರಕ ತಯಾರಿಗಳೊಂದಿಗೆ ನಿರಂತರವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುತ್ತಿದ್ದರೆ ಸರಕಾರಿ ಕ್ಷೇತ್ರದಲ್ಲಿ ಉದ್ಯೋಗಗಳು ದೊರೆಯುತ್ತದೆ. ಸರಕಾರಿ ಜಾಲತಾಣಗಳು ಮತ್ತು ದಿನಪತ್ರಿಕೆಗಳಲ್ಲಿ ಸರಕಾರಿ ಉದ್ಯೋಗಗಳ ಬಗ್ಗೆ ಮಾಹಿತಿಗಳು ಲಭ್ಯವಿದ್ದು ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಸರ್ವಜ್ಞ ಐ.ಎ.ಎಸ್. ಅಕಾಡೆಮಿಯ ಸ್ಥಾಪಕ ನಿರ್ದೇಶಕ ಸುರೇಶ್ ಎಂ.ಎಸ್. ಅಭಿಪ್ರಾಯಪಟ್ಟರು.


ಅವರು ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಆಂತರಿಕ ಗುಣಮಟ್ಟ ಖಾತರಿ ಕೋಶವು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಸರಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ನೀಡುತ್ತಾ ಮಾತನಾಡಿದರು.


ಕಾಲೇಜಿನ ಪ್ರಾಚಾರ್ಯ ಪ್ರೊ. ಹರೀಶ ಆಚಾರ್ಯ ಪಿ. ಮಾತನಾಡಿ, ವಿದ್ಯಾರ್ಜನೆಯ ಜೊತೆಗೆ ಉದ್ಯೋಗಾವಕಾಗಳ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳುವುದು ಉತ್ತಮ ಎಂದರು.


ಉಪಪ್ರಾಂಶುಪಾಲ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ನೀಲಪ್ಪ ವಿ., ಉಪನ್ಯಾಸಕರಾದ ಡಾ. ಭಾಗ್ಯಲಕ್ಷ್ಮಿ ಎಂ., ಡಾ. ಆಶಾ, ಕುಮಾರ್ ಮಾದರ್, ಗ್ರಂಥ ಪಾಲಕಿ ಡಾ. ಸುಜಾತ ಬಿ., ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್ ಎಂ.ಡಿ. ಮತ್ತಿತರರು ಉಪಸ್ಥಿತರಿದ್ದರು.


ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಕಾರ್ಯಕ್ರಮ ಸಂಯೋಜಿಸಿದರು. ಅನನ್ಯ ಭಟ್ ಸ್ವಾಗತಿಸಿ ದೀಕ್ಷಿತಾ ವಂದಿಸಿದರು. ದಿಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 





Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top