ಸುರತ್ಕಲ್: ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ವೀರ ಅಮರ ಯೋಧರ ತ್ಯಾಗದ ಫಲವೇ ನಮ್ಮ ಇಂದಿನ ಸುರಕ್ಷಿತ ಮತ್ತು ಸುಭದ್ರ ಬದುಕು. ದೇಶ ಕಾಯುವ ಯೋಧರನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಪ್ರಾಚಾರ್ಯ ಪ್ರೊ. ಹರೀಶ ಆಚಾರ್ಯ ಪಿ. ಹೇಳಿದರು. ಅವರು ಕಾಲೇಜಿನ ಎನ್.ಸಿ.ಸಿ. ವಿಭಾಗವು ಆಯೋಜಿಸಿದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಭಟ್ ಎಸ್.ಜಿ. ಮಾತನಾಡಿ ದೇಶದ ಪ್ರಗತಿಗೆ ಸದಾ ಪೂರಕವಾದ ಕೆಲಸಗಳನ್ನು ಯುವ ಜನರು ನಿರ್ವಹಿಸಬೇಕಾದರೆ ಕೆಲವೊಂದು ಸ್ಪೂರ್ತಿದಾಯಕ ಘಟನೆಗಳ ಬಗ್ಗೆ ಅರಿವು ಇರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿ ಅವಿಸ್ಮರಣೀಯ ಗೆಲುವನ್ನು ತಂದುಕೊಟ್ಟ ಭಾರತೀಯ ಸೈನ್ಯ ಮತ್ತು ಯೋಧರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ಬಹಳ ಅಗತ್ಯ ಎಂದರು.
ಉಪಪ್ರಾಚಾರ್ಯ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ನೀಲಪ್ಪ ವಿ., ಐಶೆ ಸಂಯೋಜಕ ಪ್ರೊ. ವಾಮನ ಕಾಮತ್ ಮತ್ತು ಎಲ್ಲಾ ಉಪನ್ಯಾಸಕ ಹಾಗೂ ಶಿಕ್ಷಕೇತರ ವೃಂದದವರು ಹಾಗೂ ಎನ್.ಸಿ.ಸಿ ಕೆಡೆಟ್‌ಗಳು ಕಾರ್ಗಿಲ್ ವೀರರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಮೇಜರ್. ಡಾ. ಸುಧಾ ಯು. ಕಾರ್ಯಕ್ರಮ ಸಂಯೋಜಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


 
 
 
 
 
 
 
 
 
 
 
 

 
