ಸುರತ್ಕಲ್: ಎಸ್.ಆರ್. ಹೆಗ್ದೆ ಚಾರಿಟೇಬಲ್ ಟ್ರಸ್ಟ್ (ರಿ) ಸುರತ್ಕಲ್ ವತಿಯಿಂದ ಚೇಲ್ಯಾರು ಗುತ್ತಿನ ಮನೆಯಲ್ಲಿ ಆಗಸ್ಟ್ 16 ರಂದು ಬೆಳಿಗ್ಗೆ 10 ರಿಂದ ಸೋಣದ ಸಂಕ್ರಾಂತಿ, ಆಗೋಳಿ ಮಂಜಣ್ಣ ನೆಂಪು ಮತ್ತು ಚೇಲ್ಯಾರು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ನಡೆಯಲಿದೆ.
ಎಸ್. ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಮತ್ತು ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಗೋವಿಂದ ದಾಸ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಕೃಷ್ಣಮೂರ್ತಿ ಉಪನ್ಯಾಸ ನೀಡಲಿದ್ದಾರೆ.
ಸರ್ಕಾರಿ ಪದವಿ ಪೂರ್ವ ಕಾಲೇಜು ಚೇಲ್ಯಾರಿನ ಉಪಾಧ್ಯಕ್ಷ ವೆಂಕಟೇಶ್ ಶೆಟ್ಟಿ, ಸದಸ್ಯ ಪುಷ್ಪರಾಜ್ ಶೆಟ್ಟಿ, ಸರಕಾರಿ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ತೆರಸಾ ವೇಗಸ್ ಮುಖ್ಯ ಅತಿಥಿಗಳಾಗಿರುತ್ತಾರೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಜ್ಯೋತಿ ಚೇಲ್ಯಾರು ಹಾಗೂ ಚೇಲ್ಯಾರು ಗುತ್ತಿನ ಕಸ್ತೂರಿ ಅವರು ಉಪಸ್ಥಿತರಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


