ಮಹಿಳೆಯರ ನೋವು, ಸಂಕಟ, ಹತಾಶೆ ಈ ಕಥೆಯಲ್ಲಿದೆ: ಡಾ. ಸಂತೋಷ ಆಳ್ವ

Upayuktha
0




ಸುರತ್ಕಲ್: ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯುಕ್ತ ಆಶ್ರಯದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನಾಚರಣೆಯನ್ನು ಆಚರಿಸಿ. ಪುಷ್ಪ ನಮನ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸಂತೋಷ ಆಳ್ವ ಅವರು 2025ರ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್  ಅವರ ಹಸೀನಾ ಮತ್ತು ಇತರ ಕಥೆಗಳು ಎಂಬ ಪುಸ್ತಕದ ಬಗ್ಗೆ ವಿಮರ್ಶಿಸುತ್ತಾ ಮುಸ್ಲಿಂ ಮಹಿಳೆಯರ ನೋವು, ಸಂಕಟ, ಹತಾಶೆ ಶೋಚನೀಯ ಸ್ಥಿತಿಯ ಬಗ್ಗೆ ವಿವರಿಸಿದರು.


ಕಾಲೇಜಿನ ಪ್ರಾಂಶುಪಾಲ ಪ್ರೊ ಹರೀಶ್ ಆಚಾರ್ಯ ಇವರು ಗ್ರಂಥಾಲಯದ ಮಹತ್ವ,ದ ಬಗ್ಗೆ ಹೇಳಿದರಲ್ಲದೇ, ಗ್ರಂಥಾಲಯವನ್ನು ಸಮರ್ಥವಾಗಿ ಬಳಸಿಕೊಳ್ಳಲು, ಓದುವ ಹವ್ಯಾಸವನ್ನು ಬೆಳಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆಯಿತ್ತರು. 


ಗ್ರಂಥಪಾಲಕಿ ಡಾ. ಸುಜಾತಾ. ಬಿ ಯವರು ಡಾ. ಎಸ್.ಆರ್. ರಂಗನಾಥನ್ ರವರ ಸಾಧನೆಯನ್ನು ಪರಿಚಯಿಸಿದರಲ್ಲದೇ, ಬಂದ ಅತಿಥಿಗಳನ್ನು ಸ್ವಾಗತಿಸಿದರು. ಉಪಪ್ರಾಂಶುಪಾಲ ಮತ್ತು ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕ ಪ್ರೊ. ನೀಲಪ್ಪ ವಿ, ಗಣಿತ ವಿಭಾಗದ ಮುಖ್ಯಸ್ಥ ಪ್ರೊ. ವಾಮನ ಕಾಮತ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸೌಮ್ಯ ಪ್ರವೀಣ್, ಬೋದಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ಅನನ್ಯ ದನ್ಯವಾದ ಸಮರ್ಪಿಸಿದರು.


ತೃತೀಯ ಬಿ.ಕಾಂ ವಿದ್ಯಾರ್ಥಿನಿ ಧನ್ಯಾ ಎ.ಎಸ್ ಕಾರ್ಯಕ್ರಮ ನಿರೂಪಿಸಿದರು. ಡಾ. ಸಂತೋಷ ಆಳ್ವ ಅವರಿಗೆ ಪ್ರಾಂಶುಪಾಲ ಪ್ರೊ. ಹರೀಶ್ ಆಚಾರ್ಯ ಸ್ಮರಣಿಕೆ ನೀಡಿ ಗೌರವಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top