ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸ್ಟಲ್ಲಾ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಥ್ರೋಬಾಲ್ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿತು.
ತಂಡದ ಐವರು ವಿದ್ಯಾರ್ಥಿನಿಯರಾದ ತನಿಷ್ಕ, ಸಾನಿಕ, ಅದ್ವಿಕ, ಪ್ರೇಕ್ಷ ಮತ್ತು ಸಾನ್ವಿ ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಫಲಕ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲ ಪ್ರದೀಪ್ ಕೆ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದರು. ಸಂಸ್ಥೆ ವಸತಿ ನಿಲಯದ ಪಾಲಕಿ ಕುಮಾರಿ ಇಂಚರ ತಂಡ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

