ಇಂದು ವಿಶ್ವ ಅಂಗಾಂಗ ದಾನ ದಿನಾಚರಣೆ

Upayuktha
0


ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು  ಮಂಗಳೂರು ವಿ.ವಿ. ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಆ.13ರಂದು ಮಧ್ಯಾಹ್ನ 2ಕ್ಕೆ  ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ  ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ  ಅಧ್ಯಕ್ಷತೆ ವಹಿಸಲಿದ್ದಾರೆ.


ಯುನಿಟಿ ಕೇರ್ ಅಂಡ್ ಹೆಲ್ತ್ ಸರ್ವಿಸಸ್‌ನ  ಚೇರ್ಮನ್ ಡಾ.ಸಿ.ಪಿ.ಹಬೀಬ್ ರಹಿಮಾನ್, ರೋಟರಿ ಜಿಲ್ಲೆ 3181 ಇದರ ಚುನಾಯಿತ ಗರ್ವರ್ನರ್ ಸತೀಶ್ ಬೋಳಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಂಗಾಂಗ ದಾನದ ಬಗ್ಗೆ ಬೆಂಗಳೂರಿನ ಜೀವಸಾರ್ಥಕತೆಯ ಮುಖ್ಯ ಸಂಯೋಜಕ ನೌಶಾದ್ ಪಾಶ ಮತ್ತು ರೆಡ್‌ಕ್ರಾಸ್‌ನ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ಉಪ ಸಮಿತಿಯ ನಿರ್ದೇಶಕ ಡಾ.ಬಿ.ಸಚ್ಚಿದಾನಂದ ರೈ ಉಪನ್ಯಾಸ ನೀಡಲಿದ್ದಾರೆ ಎಂದು ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top