ಯುವಕರಲ್ಲಿ ಸೇವಾ ಮನೋಭಾವನೆ ಮೂಡಿಸಲು ತರಬೇತಿ ಅಗತ್ಯ

Upayuktha
0


ಉಡುಪಿ: ಯಾವುದೇ ಕ್ಷೇತ್ರದಲ್ಲಿ ಪರಿಣಾಮಕಾರಿ ತರಬೇತಿಯು ಅಭಿವೃದ್ಧಿಯ ಶಕ್ತಿಯಾಗಿರುತ್ತದೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ದೃಷ್ಟಿಯಿಂದ ತರಬೇತಿ ಅಗತ್ಯ ರೆಡ್ ಕ್ರಾಸ್ ನಂತಹ ಸೇವಾ ಸಂಸ್ಥೆಗಳಲ್ಲಿ ತರಬೇತಿಯು ಯುವಕರನ್ನು ಸೇವಾ ಮನೋಭಾವನೆಯನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದು ಡಾ.ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ. ಸೋಜನ್ ಕೆ ಹೇಳಿದರು.


ಅವರು ಮಂಗಳೂರು ವಿಶ್ವವಿದ್ಯಾನಿಲಯ ಉಡುಪಿ ಜಿಲ್ಲಾ ಮಟ್ಟದ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರಿಗೆ ಒಂದು ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ ರೆಡ್ ಕ್ರಾಸ್ ಆಡಳಿತ ಮಂಡಳಿ ಸದಸ್ಯ ಟಿ. ಚಂದ್ರಶೇಖರ್ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.


ರೆಡ್ ಕ್ರಾಸ್ ಗೀತೆಯೊಂದಿಗೆ ಸ್ವಯಂಸೇವಕರು ಕಾರ್ಯಕ್ರಮ ಪ್ರಾರಂಭಿಸಿದರು. ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ, ಡಾ. ಗಣನಾಥ ಎಕ್ಕಾರು ಪ್ರಸ್ತಾವನೆ ಮಾಡಿ ಸ್ವಾಗತಿಸಿದರು. ರೆಡ್ ಕ್ರಾಸ್ ಸಂಚಾಲಕಿ ಡಾ. ದಿವ್ಯ ಎಂ.ಎಸ್ ಮತ್ತು ಜಿಲ್ಲಾ ವಿಕಲಚೇತನರ ಪುನರ್ ವಸತಿ ಕೇಂದ್ರದ ಜಯಶ್ರೀ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.


ಈ ಸಂದರ್ಭದಲ್ಲಿ ಚಾರಿತ್ರಿಕ ಜಿನೇವಾ ಒಪ್ಪಂದದ ಮಾಹಿತಿ ನೀಡಲಾಯಿತು. ರೆಡ್ ಕ್ರಾಸ್ ಸದಸ್ಯ ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ನಿಲುವಂಗಿಯನ್ನು ವಿತರಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ 80 ಸ್ವಯಂಸೇವಕರು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top