ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಉಡುಪಿ ಶ್ರೀ ಕೃಷ್ಣ ಮಠದ ವಿಶ್ವಗೀತಾ ಪರ್ಯಾಯ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಅಖಿಲ ಕರ್ನಾಟಕ ಮಹಿಳಾ ಸೌಂದರ್ಯ ತಜ್ಞೆಯರ ಸಂಘದ ಸಹಯೋಗದೊಂದಿಗೆ ಆ.24 ರಂದು ಕರಾವಳಿ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಭಾರತದ ವಿವಿಧ ರಾಜ್ಯದ ಸಾಂಪ್ರದಾಯಿಕ ನೂರು ಮದುಮಕ್ಕಳ ಶೃಂಗಾರ ಪ್ರದರ್ಶನ ರಾಜಾಂಗಣದಲ್ಲಿ ನಡೆಯಲಿದೆ.
ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರ ಅನುಗ್ರಹ ಹಾಗೂ ಪಾಶ್ಚಾತ್ಯ ಸಂಸ್ಕೃತಿ, ಉಡುಗೆ ತೊಡುಗೆಗಳಿಗೆ ಮಾರು ಹೋಗುತ್ತಿರುವ ಯುವ ಪೀಳಿಗೆಯನ್ನು ಭಾರತೀಯತೆಯತ್ತ ಸೆಳೆಯುವ ಕಲ್ಪನೆ ಮತ್ತು ಮದುಮಕ್ಕಳ ಶೃಂಗಾರವನ್ನೇ ಬದುಕಾಗಿಸಿಕೊಂಡ ಮಹಿಳಾ ಸೌಂದರ್ಯ ತಜ್ಞೆಯರಿಗೆ ವಿಶೇಷ ಅವಕಾಶಗಳು ಲಭಿಸುವ ಆಶಯದೊಂದಿಗೆ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.30 ಕ್ಕೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಪ್ರದರ್ಶನವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ನಿಕೇತನ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸಂಘದ ಅಧ್ಯಕ್ಷೆ ನಂದಾ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಮುನ್ನೂರಕ್ಕೂ ಹೆಚ್ಚು ಸದಸ್ಯರು ಭಾಗವಹಿಸಲಿದ್ದರೆ. ಪ್ರದರ್ಶನದ ಜೊತೆಗೆ ಗೃಹ ಉತ್ಪನ್ನಗಳ ಮಳಿಗೆಯೂ ಇರಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ