ಉಜಿರೆ: ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಗೃಹವಿಜ್ಞಾನ ವಿಭಾಗದ ಪ್ರಸಕ್ತ ವರ್ಷದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ‘ಗೃಹವಾಹಿನಿ’ ಜು.25ರಂದು ನಡೆಯಿತು.
ವಿಭಾಗದ ನಿಕಟಪೂರ್ವ ಮುಖ್ಯಸ್ಥೆ ಪ್ರೊ. ಆಲ್ಫೋನ್ಸಮ್ಮ ಅವರು ಉದ್ಘಾಟಿಸಿ ಮಾತನಾಡಿ, ಸ್ವಾವಲಂಬಿ ಜೀವನ ಹಾಗೂ ಅದಕ್ಕೆ ಬೇಕಾದ ಎಲ್ಲಾ ಪೂರಕ ಶಿಕ್ಷಣ ಗೃಹವಿಜ್ಞಾನ ಒದಗಿಸುತ್ತದೆ ಎಂದರು. ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುವುದು, ಅಡುಗೆ ಮಾಡುವುದು ಸಹಿತ ನಿತ್ಯ ಜೀವನಕ್ಕೆ ಬೇಕಾದ ಎಲ್ಲಾ ಕೌಶಲಗಳನ್ನು ಸೂಕ್ತ ರೀತಿಯಲ್ಲಿ ತಿಳಿದುಕೊಳ್ಳಲು ಅವಕಾಶ ದೊರೆಯುತ್ತದೆ ಎಂದರು.
ವಿಭಾಗದ ಭಿತ್ತಿಪತ್ರಿಕೆ ಗೃಹವಾಣಿಯ ನೂತನ ಸಂಚಿಕೆ ಬಿಡುಗಡೆಗೊಳಿಸಲಾಯಿತು. ವಿಭಾಗದ ಮುಖ್ಯಸ್ಥೆ ಶೋಭಾ, ಸಹಾಯಕ ಪ್ರಾಧ್ಯಾಪಕಿ ಐಶ್ವರ್ಯ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಂಜಲಿ ಎಚ್ ಆರ್, ಐಶ್ವರ್ಯ ಹೆಚ್ ಆರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದರ್ಶಿನಿ ಮತ್ತು ತಂಡದವರು ಪ್ರಾರ್ಥಿಸಿದರು. ಅಂಜಲಿ ಸ್ವಾಗತಿಸಿ, ಸೌಜನ್ಯ ವಂದಿಸಿ, ಸನುಷ ಪಿಂಟೋ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ