ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭ: ವೀರು ಶೆಟ್ಟಿ

Upayuktha
0



ಉಜಿರೆ:  ಜೀವನದಲ್ಲಿ ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭವಾಗುತ್ತದೆ. ನೀರಲ್ಲದರೂ ಹಾಕು, ಹಾಲಲ್ಲಾದರೂ  ಹಾಕು ಎನ್ನುವ ಹಾಗೇ ನೀರಲ್ಲಿ ಮೀನನಾಗಿ, ಹಾಲಿನಲ್ಲಿ ಕೆನೆಯಾಗಿ ಬದುಕುಬೇಕು ಇದೇ ರೀತಿಯಲ್ಲಿ ನಮ್ಮ ಜೀವನವನ್ನು ಕಟ್ಟಿಕೊಳ್ಳಬೇಕು. ಇಂದು ಪುರುಷ-ಮಹಿಳೆಯರು ಸಮಾನವಾಗಿ ವೃತ್ತಿಯಾಗಿ ನಡೆಸುತ್ತಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ ಅಭಿಪ್ರಾಯಪಟ್ಟರು.


ಕಲಿಕೆ ಅನ್ನುವುದು ನಿರಂತರವಾಗಿ ಇರುವುದು ಅದನ್ನು ನಾವು ಅನುಸರಿಸಬೇಕು. ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ.  ಪ್ರತಿಯೊಬ್ಬರು ವೃತ್ತಿ ಜೀವನದಲ್ಲಿ ತಮ್ಮದೇ ಆದ ಶಿಸ್ತು ಅನ್ನು ಅಳವಡಿಸಿಕೊಂಡರೆ  ಯಶಸ್ಸು ಕಾಣಬಹುದು. ಜೊತೆಗೆ ಬಹುಮುಖ್ಯವಾಗಿ ದುರಭ್ಯಾಸಗಳಿಂದ ದೂರ ಇರಬೇಕು ಎಂದು ಅವೆರು ನುಡಿದರು.

ಕ್ಷೌರಿಕ ವೃತಿಯಲ್ಲಿ ಹೊಸ ಬದಲಾವಣೆಗಳು ಆಗುತ್ತಿವೆ. ಅದನ್ನು ಆಳವಡಿಸಿಕೊಂಡು ವೃತ್ತಿಯಲ್ಲಿ ಮುನ್ನಡೆಯಿರಿ. ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ರುಡ್‌ ಸೆಟ್‌ ಸಂಸ್ಥೆಯಲ್ಲಿ ಅತ್ಯತ್ತಮವಾದ ಸೌಲಭ್ಯಗಳೊಂದಿಗೆ ಉಚಿತ  ತರಬೇತಿ ನೀಡಿ ಯುವಜನರಿಗೆ ಅನುಕೂಲ ಮಾಡಿದ್ದಾರೆ. ಇದು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಅವರು ತಿಳಿಸಿದರು.


ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ಮೆನ್ಸ್ ಪಾರ್ಲರ್‌ ಸೆಲೂನ್‌  ಉದ್ಯಮಿ  ತರಬೇತಿಯ  ಸಮಾರೋಪ ಸಮಾರಂಭದಲ್ಲಿ  ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ  ವಿತ್ತರಿಸಿ ಮಾತನಾಡಿದರು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು  ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು  ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ  ಬಿ.ಪಿ. ವಿಜಯ ಕುಮಾರ್ ವಹಿಸಿ ಮಾತನಾಡಿದರು. ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.


ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ, ಲೋಕೇಶ್ ಮತ್ತು  ರವಿ ಕುಮಾರ್‌ ಕಡೂರು, ಉಪಸ್ಥಿತರಿದ್ದರು. ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ  ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್  ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ಸುಮಾರು 35 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಮಂಜುನಾಥ, ಪ್ರಜ್ವಲ್, ರಕ್ಷಿತ್  ತರಬೇತಿಯ ಅನುಭವ ಹಂಚಿಕೊಂಡರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top