ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿ ಸಂಘ ‘ಸ್ಪೆಕ್ಟ್ರಾ’ ಉದ್ಘಾಟನೆ

Upayuktha
0


ಉಜಿರೆ: ಶ್ರೀ ಧ. ಮಂ. ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿ ಸಂಘ ‘ಸ್ಪೆಕ್ಟ್ರಾ’ ಉದ್ಘಾಟನೆ ಮತ್ತು ‘ಆ್ಯಟಮ್ಸ್ ಟು ಆ್ಯಪ್ಸ್: ಫಿಸಿಕ್ಸ್ ಬಿಹೈಂಡ್ ಸ್ಮಾರ್ಟ್ ಇಲೆಕ್ಟ್ರಾನಿಕ್ಸ್ ‘ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಸಂಪನ್ಮೂಲ ವ್ಯಕ್ತಿಯಾಗಿದ್ದರು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೂಲಭೂತ ವಿಜ್ಞಾನಗಳಾದ ಭೌತಶಾಸ್ತ್ರ, ಗಣಿತಶಾಸ್ತ್ರ, ರಸಾಯನ ಶಾಸ್ತ್ರ ಮುಂತಾದವುಗಳ ಅಭ್ಯಾಸವು ತಂತ್ರಜ್ಞಾನ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.


“ವಿದ್ಯಾರ್ಥಿ ದೆಸೆಯಲ್ಲಿ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಅತ್ಯಗತ್ಯ. ನಮ್ಮ ಜ್ಞಾನ ಮತ್ತು ಅನುಭವಗಳ ವೃದ್ಧಿಗೆ ಅವುಗಳು ಪೂರಕವಾಗುತ್ತವೆ. ಸ್ಮಾರ್ಟ್ ಎಲೆಕ್ಟ್ರಾನಿಕ್ಸ್ ಹಿಂದಿನ ಕಾರ್ಯಚಟುವಟಿಕೆಯನ್ನು ಅರಿತು ಮುಂದುವರಿಯುವುದು ಆವಶ್ಯಕ” ಎಂದರು.


ವಿಜ್ಞಾನ ನಿಕಾಯದ ಡೀನ್ ಡಾ. ಸವಿತಾ ರಾವ್, ವಿಭಾಗ ಮುಖ್ಯಸ್ಥೆ ಅಪೇಕ್ಷ ಜೈನ್, ಪ್ರಾಧ್ಯಾಪಕ ವೃಂದ, ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಹನ್, ಉಪಾಧ್ಯಕ್ಷ ಅವಿನಾಶ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಹರ್ಷಿತಾ ಸ್ವಾಗತಿಸಿ, ವಂದಿಸಿದರು. ಸಿಂಚನ ಕಾರ್ಯಕ್ರಮ ನಿರೂಪಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top