ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಇತಿಹಾಸ ಉಪನ್ಯಾಸಕರ ವೇದಿಕೆಯ ಆಶ್ರಯದಲ್ಲಿ ಗುರುವಾರ ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಪಿ.ಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಇತಿಹಾಸ ಉಪನ್ಯಾಸಕರಿಗಾಗಿ ಏಕದಿನ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ಬಿ.ವೋಕ್ ಡಿಜಿಟಲ್ ಮೀಡಿಯಾ ಮತ್ತು ಚಲನಚಿತ್ರ ನಿರ್ಮಾಣ ವಿಭಾಗದ ಮುಖ್ಯಸ್ಥರಾದ ಮಾಧವ ಹೊಳ್ಳ ಅವರನ್ನು ಮುಖ್ಯ ಅತಿಥಿ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅವರು “ಡಿಜಿಟಲ್ ಯುಗದಲ್ಲಿ ಇತಿಹಾಸ: ಬೋಧನೆ ಮತ್ತು ಅಧ್ಯಯನದ ನವೀನ ದೃಷ್ಠಿಕೋನ” ವಿಷಯದ ಮೇಲೆ ಉಪನ್ಯಾಸ ನೀಡಿದರು.
ತಮ್ಮ ಭಾಷಣದಲ್ಲಿ ಅವರು ಡಿಜಿಟಲ್ ಮೀಡಿಯಾ ಉಪಕರಣಗಳನ್ನು ಇತಿಹಾಸ ಶಿಕ್ಷಣದಲ್ಲಿ ಪರಿಣಾಮಕಾರಿಯಾಗಿ ಬಳಸುವ ವಿಧಾನಗಳ ಬಗ್ಗೆ ವಿವರಿಸಿದರು. ಇತಿಹಾಸ ಬೋಧನೆಯನ್ನು ಹೆಚ್ಚು ಆಕರ್ಷಕ ಹಾಗೂ ಪರಿಣಾಮಕಾರಿ ಮಾಡುವ ನವೀನ ಕ್ರಮಗಳನ್ನೂ ಅವರು ಒತ್ತಿ ಹೇಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ