ಉಜಿರೆ: ಶ್ರೀ ಧ. ಮಂ.ಮ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಶ್ರೀ ಧ.ಮಂ. ಕಾಲೇಜು, ಉಜಿರೆ ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಡಾ. ಮೋಹನ್ ನಾರಾಯಣ ಹಾಗೂ ಶ್ರೀಮತಿ ಪೂರ್ಣಿಮಾರವರು ಮಾಹಿತಿ ನೀಡಿದರು.
ತಮ್ಮ ಮನೆಯಲ್ಲಿ ಅಳವಡಿಸಿರುವ ಮಳೆ ಕೊಯ್ಲು, ಮಳೆ ನೀರಿನ ಸ್ವಚ್ಛತೆ, ಸೋಲಾರ್ ದೀಪ, ನೀರಿನ ಶೇಖರಣೆ ಮುಂತಾದುವುಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆಗಳೊಂದಿಗೆ ವಿವರಿಸಿದರು.
ಎನ್ ಎಸ್ ಎಸ್ ಸಲಹಾ ಸಮಿತಿ ಸದಸ್ಯ ನಾಗರಾಜ್ ಭಂಡಾರಿ, ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಉಪಸ್ಥಿತರಿದ್ದರು. ಸ್ವಯಂ ಸೇವಕ ಸಂದೀಪ್ ಸ್ವಾಗತಿಸಿ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


