ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕಲಾ ಮತ್ತು ಮಾನವಿಕ ಶಾಲೆಯ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ವಿನೋಲಾ ಸಾಂಡ್ರಾ ಸಿಕ್ವೇರಾ ಅವರ "ಮಹಿಳಾ ಮತ್ತು ಮಕ್ಕಳ ಆರೋಗ್ಯ ಸೇವೆಗಳು- ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲೇಖದೊಂದಿಗೆ ಒಂದು ಅಧ್ಯಯನ" ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿಯನ್ನು ನೀಡಿ ಗೌರವಿಸಿದೆ.
ಇವರು ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. (ಡಾ) ಶ್ರೀಪತಿ ಕಲ್ಲೂರಾಯ ಪಿ. ಅವರ ಯಶಸ್ವಿ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು.
ವಿನೋಲಾರವರು ಕಿನ್ನಿಗೋಳಿಯ ಶ್ರೀ ವಿನ್ಸೆಂಟ್ ಸಿಕ್ವೇರಾ ಮತ್ತು ಶ್ರೀಮತಿ ಏಂಜೆಲಿನ್ ಸಿಕ್ವೇರಾ ಅವರ ಪುತ್ರಿ ಮತ್ತು ಕಾರ್ಕಳದ ಬೆಳ್ಮಣ್‍ನ ಶ್ರೀ ರೋವೆನ್ ಪ್ರೇಮ್ ಡಿಸಿಲ್ವಾ ಅವರ ಪತ್ನಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ