ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿರುವ ವಿದ್ಯಾಸಂಸ್ಥೆಗಳ ವತಿಯಿಂದ 44ನೇ ವರ್ಷದ ಶ್ರೀ ಗಣೇಶೋತ್ಸವ ಆ.27ರಿಂದ ಆ.29ರವರೆಗೆ ವಿವೇಕಾನಂದ ವಿದ್ಯಾಲಯಗಳ ಆವರಣದ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ. ‘ವಿಶ್ವದ ಸವಾಲುಗಳಿಗೆ ಭಾರತವೇ ಬೆಳಕು’ ಎಂಬ ವಿಶೇಷ ಧ್ಯೇಯದೊಂದಿಗೆ ಈ ಬಾರಿಯ ಗಣೇಶೋತ್ಸವ ಆಚರಣೆ ನಡೆಯಲಿದ್ದು, ಮೂರೂ ದಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ.
ಆ.27ರಂದು ಬೆಳಗ್ಗೆ 5.30ರಿಂದ ಶಿವಪೇಟೆಯಿಂದ ಶ್ರೀ ಗಣೇಶ ವಿಗ್ರಹವನ್ನು ತಂದು ಬೆಳಗ್ಗೆ 9.30ಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಲಾಗುವುದು. ಮಧ್ಯಾಹ್ನ 12 ಕ್ಕೆ ಹಾಗೂ ರಾತ್ರಿ 7 ಗಂಟೆಗೆ ಮಹಾಪೂಜೆ ನಡೆಯಲಿದೆ. ಆ.28ರಂದು ಬೆಳಗ್ಗೆ 10 ಗಂಟೆಗೆ ಡಾ|ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಕ್ಕೆ ಹಾಗೂ ರಾತ್ರಿ 7 ಗಂಟೆಗೆ ಮಹಾಪೂಜೆ ನಡೆಯಲಿದೆ. ಆ.29ರಂದು ಮಧ್ಯಾಹ್ನ 12ಕ್ಕೆ ಮಹಾಪೂಜೆ ಆದ ಬಳಿಕ ಮಧ್ಯಾಹ್ನ 2ರಿಂದ ಶ್ರೀ ಗಣೇಶ ವಿಗ್ರಹದ ಶೋಭಾಯಾತ್ರೆ ಹಾಗೂ ಜಲಸ್ತಂಭನ ನೆರವೇರಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ