ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Upayuktha
0


ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕುತ್ತೂರು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ ಮೂವರು ವಿದ್ಯಾರ್ಥಿನಿಯರು ಹಾಗೂ ಒಬ್ಬ ಬಾಲಕ ಇದ್ದಾರೆ.


17ರ ವಯೋಮಾನದೊಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ, 14 ವಯೋಮಾನದೊಳಗಿನ ವರಲ್ಲಿ ಪ್ರಥಮ ಸ್ಥಾನ ಪಡೆದ 8ನೇ ತರಗತಿ ಹಂಸಿ, ಗಹನ ಆರ್. ಕುಲಾಲ್  ಹಾಗೂ 17ರ ವಯೋಮಾನದೊಳಗಿನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದ 9ನೇ ತರಗತಿಯ ವಿನಯ್ ಸಿ.ಎಸ್. ಜಿಲ್ಲಾಮಟ್ಟಕ್ಕೆ ಆಯ್ಕೆಯಾದವರು.


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top