ಯೋಗಾಸನ ಸ್ಪರ್ಧೆ; ರಾಷ್ಟ್ರಮಟ್ಟದ ಚಾಂಪಿಯನ್ ಶಿಪ್‌ಗೆ ವಿದ್ಯಾರಣ್ಯ ವಿದ್ಯಾರ್ಥಿನಿ ಆಯ್ಕೆ

Chandrashekhara Kulamarva
0



ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (KYSA) ಆಯೋಜಿಸಿದ್ದ 6ನೇ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್‌ನಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಲಾಸ್ಯಾ ಮಧ್ಯಸ್ಥ ಅತ್ಯುತ್ತಮ ಪ್ರದರ್ಶನದ ಮೂಲಕ ರಾಷ್ಟ್ರೀಯ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಿದ್ದಾರೆ.


ಸಾಂಪ್ರದಾಯಿಕ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಟ್ವಿಸ್ಟಿಂಗ್ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ, ಸಾಂಪ್ರದಾಯಿಕ ತಂಡ ವಿಭಾಗದಲ್ಲಿ ಪ್ರಥಮ ಸ್ಥಾನ, ಬ್ಯಾಕ್‌ಬೆಂಡ್ ವೈಯಕ್ತಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ 3 ಚಿನ್ನದ ಪದಕಗಳನ್ನು ಹಾಗೂ 1 ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ಹಾಗೂ ಸಂಸ್ಥೆಯ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top