ಪುತ್ತೂರಿನಲ್ಲಿ ಸಾಹಿತ್ಯ ಗಾನ ನೃತ್ಯ ವೈಭವ

Upayuktha
0


ಕಾಸರಗೋಡು: ಶಿವಮಣಿ ಕಲಾತಂಡದ ಆಯೋಜಕತ್ವದಲ್ಲಿ ಪುತ್ತೂರು ಶ್ರೀ ಸೋಮಲಿಂಗೇಶ್ವರ ಮಂದಿರ ಲಿಂಗದಗುಡ್ಡೆ ಶಿವನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಾ. ವಾಣಿಶ್ರೀ ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ವತಿಯಿಂದ 117ನೇ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮವು ವೈಭವ ಪೂರ್ಣವಾಗಿ ಜರಗಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಕಲಾರತ್ನಗಳಾದ ಮಧುಲತಾ ಪುತ್ತೂರು, ಜಯಶ್ರೀ ದಿನೇಶ್ ಪುತ್ತೂರು, ಗಿರೀಶ್ ಪೆರಿಯಡ್ಕ, ಪೃಥ್ವಿಕ, ಪೂರ್ವಾಂಕ, ಅಚ್ಚುತ ಭಟ್ ಮುಂತಾದ ಕಲಾವಿದರು ಭಾಗವಹಿಸಿ ತಮ್ಮ ಕಲಾ ಪ್ರೌಢಿಮೆಯನ್ನು ಮೆರೆದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲಾ ಕಲಾವಿದರಿಗೆ ಸಂಸ್ಥೆಯ ವತಿಯಿಂದ ಗೌರವ ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು.


ಡಾ. ವಾಣಿಶ್ರೀ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಹಾಗೂ ಕೃಷ್ಣ ವೇಷ ಸ್ಪರ್ಧೆ, ಭಕ್ತಿ ಗೀತೆ ಪದ್ಯ  ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದ್ದರು. ಸಂಸ್ಥೆಯ ಬಾಲಪ್ರತಿಭೆ ಪೃಥ್ವಿಕ ಶ್ರೀ ಕೃಷ್ಣ ವೇಷ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಎಲ್ಲರ ಪ್ರಶಂಸೆಗೆ ಪಾತ್ರರಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top