ಎಸ್‌ಡಿಎಂ ಮಹಿಳಾ ಐಟಿಐಗೆ ಶೇ 100 ಫಲಿತಾಂಶ

Chandrashekhara Kulamarva
0




ಉಜಿರೆ: ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿ, ಇವರು 2025 ಜುಲೈ ತಿಂಗಳಿನಲ್ಲಿ ನಡೆಸಿದ 2024-25ನೇ ಸಾಲಿನ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇಕಡ 100 ಫಲಿತಾಂಶ ಲಭಿಸಿದೆ.


ಪರೀಕ್ಷೆಗೆ 47 ವಿದ್ಯಾರ್ಥಿನಿಯರು ಹಾಜರಾಗಿದ್ದು, ಅದರಲ್ಲಿ 32 ವಿದ್ಯಾರ್ಥಿನಿಯರು ಉತ್ತಮ ದರ್ಜೆಯಲ್ಲಿ ಹಾಗೂ 15 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕೋಪಾ ವೃತ್ತಿಯ ಕು. ಅಶೂರಾ (549/600) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ ಕು. ಸೌಜನ್ಯ (537/600) ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.


ಅದೇ ರೀತಿ ಈ ವರುಷ ಅಂದರೆ 2024-25 ನೇ ಸಾಲಿನಲ್ಲಿ ಆರಂಭಿಸಿದ ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿಯಲ್ಲಿ ಕು. ರಾಜಶ್ರೀ (551/600) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ ಕು. ಸೌರಭ  (538/600) ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.


ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಯವರಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್ ಇವರುಗಳು ಸಂಸ್ಥೆಯ ಪ್ರಾಂಶುಪಾಲರು, ಕಿರಿಯ ತರಬೇತಿ ಅಧಿಕಾರಿಗಳನ್ನು ಹಾಗೂ ಎಲ್ಲಾ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top