ಮೈಸೂರು, ಚಾಮರಾಜನಗರದಿಂದ 2,000 ಮಂದಿ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ

Upayuktha
0


ಶಾಸಕ ಕೆ. ಹರೀಶ್ ಗೌಡರ ನೇತೃತ್ವದಲ್ಲಿ ಎರಡು ಸಾವಿರ ಮಂದಿ ಭಕ್ತರು ಹಾಗೂ ಅಭಿಮಾನಿಗಳು ಬುಧವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದರು.


ಉಜಿರೆ: ಮೈಸೂರಿನ ಚಾಮರಾಜನಗರ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡರ ನೇತೃತ್ವದಲ್ಲಿ ಎರಡು ಸಾವಿರ ಮಂದಿ ಭಕ್ತರು ಹಾಗೂ ಅಭಿಮಾನಿಗಳು ಬುಧವಾರ ಸಂಜೆ ಧರ್ಮಸ್ಥಳಕ್ಕೆ 50 ವಾಹನಗಳಲ್ಲಿ ಆಗಮಿಸಿದರು. ಅವರನ್ನು ಮುಖ್ಯ ಪ್ರವೇಶ ದ್ವಾರದ ಬಳಿ ಸ್ವಾಗತಿಸಲಾಯಿತು.


ಬಳಿಕ ಅವರು ದೇವರ ದರ್ಶನ ಮಾಡಿ, “ಅನ್ನಪೂರ್ಣ”ದಲ್ಲಿ ಪ್ರಸಾದ ಸ್ವೀಕರಿಸಿದರು. ಇಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಗೌರವಾರ್ಪಣೆ ಮಾಡುವ ಕಾರ್ಯಕ್ರಮವಿದೆ.


ಧರ್ಮಸ್ಥಳದ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಸರ್ವಧರ್ಮ ಸಮನ್ವಯ ಕ್ಷೇತ್ರದ ರಕ್ಷಣೆ ಹಾಗೂ ಪಾವಿತ್ರ್ಯ ಕಾಪಾಡುವ ಬಗ್ಗೆ ಅವರು ತಮ್ಮಪೂರ್ಣ ಬೆಂಬಲ ವ್ಯಕ್ತಪಡಿಸುವರು ಎಂದು ಶಾಸಕ ಕೆ. ಹರೀಶ್ ಗೌಡ ತಿಳಿಸಿದ್ದಾರೆ.


ಕರ್ನಾಟಕ ರಾಜ್ಯ ಪತ್ತಿನ ಸಹಕಾರಿ ಮಹಾಮಂಡಲದ ಅಧ್ಯಕ್ಷರಾದ ಚಂದ್ರಶೇಖರ, ಕಾಂಗ್ರೆಸ್ ಪಕ್ಷದ ಮುಖಂಡ ಮಂಜುನಾಥ, ಬ್ಲಾಕ್ ಅಧ್ಯಕ್ಷ ರಮೇಶರಾಯಪ್ಪ, ರವಿ, ಮೈಸೂರಿನ ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಪುಷ್ಪವಲ್ಲಿ ಮೊದಲಾದವರು ಸೇರಿದಂತೆ ಸುಮಾರು 2000 ಮಂದಿ ಆಗಮಿಸಿದ್ದಾರೆ.  



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top