ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ, ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗುರುವಾರ (ಸೆ.25) ಸಂಜೆ 7-00 ಗಂಟೆಗೆ ಉಜಿರೆಯ ಶಾರದಾ ಮಂಟಪದಲ್ಲಿ ಡಾ.ಎಸ್.ಎಲ್. ಭೈರಪ್ಪರವರಿಗೆ ನುಡಿನಮನ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.
ಭೈರಪ್ಪನವರ ಬದುಕು- ಬರಹ- ಬವಣೆ ಬಗ್ಗೆ ಶಿವಪ್ರಸಾದ್ ಸುರ್ಯರವರು ಹೃದಯಸ್ಪರ್ಶಿಯಾಗಿ ಮಾತನಾಡಿ, ನುಡಿ ನಮನ ಸಲ್ಲಿಸಿದರು. ಆಗಮಿಸಿರುವ ಎಲ್ಲರೂ ಪುಷ್ಪ ನಮನವನ್ನು ಸಲ್ಲಿಸಿ, ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.
ಶ್ರೀಮತಿ ವಸಂತಿ ಕುಳಮರ್ವ ಶಾರದಾ ಸ್ತುತಿಗೈದು, ಪ್ರೊ. ಗಣಪತಿ ಭಟ್ ಕುಳಮರ್ವ ಸ್ವಾಗತಿಸಿ, ರಾಮಕೃಷ್ಣ ಭಟ್ ಬದನಾಜೆ ಇವರು ಧನ್ಯವಾದ ಗೈದರು. ಶ್ರೀಮತಿ ಸುಭಾಷಿಣಿ ಕಾರ್ಯಕ್ರಮ ನಿರೂಪಿಸಿದರು. ಶಾಂತಿ ಮಂತ್ರದೊಂದಿಗೆ ಸಂಪನ್ನಗೊಂಡಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ