ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ) ಮಂಗಳೂರು ವಿಭಾಗ ಮತ್ತು ಕೆನರಾ ಕಾಲೇಜು ಮಂಗಳೂರು ಸಹಯೋಗದೊಂದಿಗೆ ಅಬ್ಬಕ್ಕ @ 500 ಪ್ರೇರಣಾದಾಯಿ ನೂರು ಉಪನ್ಯಾಸಗಳ ಸರಣಿ ಎಸಳು- 75 ಇದನ್ನು ಇಂದು (17/9/2025) ಕೆನರಾ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಅಷ್ಟಾವಧಾನಿ ಡಾ. ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಅವರಿಂದ ರಾಣಿ ಅಬ್ಬಕ್ಕ ಬದುಕು ಆಧಾರಿತ ಕನ್ನಡ ಅಷ್ಟಾವಧಾನ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ