ಅಬ್ಬಕ್ಕ @500 ಉಪನ್ಯಾಸ ಸರಣಿ: 50ನೇ ಕಾರ್ಯಕ್ರಮ ಕಟೀಲಿನಲ್ಲಿ ಸೆ.9ಕ್ಕೆ

Upayuktha
0


ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ನಡೆಯುತ್ತಿರುವ ಅಬ್ಬಕ್ಕ @500 ಪ್ರೇರಣಾದಾಯಿ 100 ಉಪನ್ಯಾಸ ಸರಣಿಯ 50ನೇ ಕಾರ್ಯಕ್ರಮವು ಸೆಪ್ಟೆಂಬರ್ 9 ಮಂಗಳವಾರದಂದು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು ಕಟೀಲು ಇಲ್ಲಿನ ಭಾರತಿ ಸಭಾಂಗಣದಲ್ಲಿ ನಡೆಯುವುದಕ್ಕಿದೆ.


ವೀರರಾಣಿ ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ ರಾಜ್ಯಾದ್ಯಂತ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ 500 ಉಪನ್ಯಾಸ ಸರಣಿಯನ್ನು ಆಯೋಜಿಸಿದ್ದು ಮಂಗಳೂರು ವಿಭಾಗವು 100 ಉಪನ್ಯಾಸ ಸರಣಿಯನ್ನು ವಿವಿಧ ಕಾಲೇಜುಗಳಲ್ಲಿ ಹಮ್ಮಿಕೊಂಡಿದೆ.


ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ರಾಣಿ ಅಬ್ಬಕ್ಕಳ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಮಹದುದ್ದೇಶವನ್ನು ಹೊಂದಿದೆ. ಸರಣಿ ಉಪನ್ಯಾಸದ 50ನೇ ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರಿನ ಸಾಮಾಜಿಕ ಕಾರ್ಯಕರ್ತ ನಂದೀಶ್ ಅವರು ಮಾಡಲಿದ್ದಾರೆ. ಶ್ರೀ ಕ್ಷೇತ್ರ ಕಟೀಲು ಇಲ್ಲಿನ ಅನುವಂಶಿಕ ಅರ್ಚಕರಾದ ಪೂಜ್ಯ ಶ್ರೀ ಹರಿನಾರಾಯಣದಾಸ ಆಸ್ರಣ್ಣರು ಆಶೀರ್ವಚನ ನೀಡಲಿದ್ದಾರೆ. ಎಂ ಆರ್ ಪಿ ಎಲ್ ಮಂಗಳೂರು ಇಲ್ಲಿನ ವಿಶ್ರಾಂತ ಮಹಾಪ್ರಬಂಧಕರಾದ ವೀಣಾ ಟಿ ಶೆಟ್ಟಿ ಅವರು ರಾಣಿ ಅಬ್ಬಕ್ಕ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕ ಸಾ ಪ ಮೂಲ್ಕಿ ತಾಲೂಕಿನ ಅಧ್ಯಕ್ಷ ಮಿಥುನ್ ಉಡುಪ ಕೊಡೆತ್ತೂರು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top