ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಉದ್ಯೋಗವನ್ನು ಮಾತ್ರ ಕನಸು ಕಾಣದೆ, ಸಮಾಜಕ್ಕೆ ಹೊಸ ಉದ್ಯೋಗಾವಕಾಶಗಳನ್ನು ನೀಡಬಲ್ಲ ನಾಯಕರಾಗಿ ರೂಪುಗೊಳ್ಳಬೇಕು. ನಾಯಕತ್ವದ ನಿಜವಾದ ಅರ್ಥವು ಸಂಕಷ್ಟದ ಸಂದರ್ಭಗಳಲ್ಲಿ ಸಹಾನುಭೂತಿಯೊಂದಿಗೆ ನಡೆದುಕೊಳ್ಳುವುದರಲ್ಲಿ ಅಡಗಿದೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಸದಾ ಆತ್ಮವಿಶ್ವಾಸದಿಂದಿರಬೇಕು. ತಮಗೆ ತಾವೇ ಪ್ರೋತ್ಸಾಹ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಕೀಳರಿಮೆ ಬೆಳೆಸದೆ, ತಮ್ಮ ಬೆನ್ನನ್ನು ತಾವೇ ತಟ್ಟುತ್ತಾ ಮುಂದೆ ಸಾಗುವುದು ಸಾಧನೆಯ ರಹಸ್ಯವಾಗಿದೆ. ಮಾನಸಿಕ, ದೈಹಿಕ, ಭಾವನಾತ್ಮಕ, ಸಾಮಾಜಿಕ ಹಾಗೂ ಆರ್ಥಿಕ ಆರೋಗ್ಯಗಳ ಕಡೆಗೆ ಪ್ರಾಮುಖ್ಯತೆಯನ್ನು ನೀಡಿ. ವಿದ್ಯಾರ್ಥಿ ಜೀವನವೇ ವ್ಯಕ್ತಿತ್ವ ನಿರ್ಮಾಣದ ಅವಧಿ. ಈ ಹಂತದಲ್ಲಿ ನೈತಿಕ ಮೌಲ್ಯಗಳು, ದೇಶಭಕ್ತಿ, ಶಿಸ್ತು, ಸಮಯಪಾಲನೆ ಮತ್ತು ಸಮಾಜಮುಖಿ ಮನೋಭಾವವನ್ನು ಅಳವಡಿಸಿಕೊಂಡರೆ, ಭವಿಷ್ಯದಲ್ಲಿ ನೀವು ಯಾವ ಕ್ಷೇತ್ರಕ್ಕೂ ಹೋದರೂ ಸಾಧನೆ ಖಚಿತ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ಅದ್ಯಕ್ಷತೆವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಮೊಹಮ್ಮದ್ ಸದಾಕತ್, ಉಪಪ್ರಾಂಶುಪಾಲೆ ಝಾನ್ಸಿ ಪಿಎನ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಬಿತಾ ಮೋನಿಸ್ ಇದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
