ಅಂಬಿಕಾ ವಿದ್ಯಾಲಯದ ಮಂದಿರಾಕಜೆ ಹಾಗೂ ಸಾತ್ವಿಕ್ ಜಿ.ರಾಷ್ಟ್ರಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್‍ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಿದ್ಯಾರ್ಥಿಗಳು,ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಝೋನಲ್ ಹಂತದ ಗಣಿತ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿದ್ದಾರೆ. 


ಕಿಶೋರ ವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ ಗಿರೀಶಗೌಡ ಹಾಗೂ ಸುಮಿತ್ರಾ ದಂಪತಿಗಳ ಪುತ್ರ 9ನೇ ತರಗತಿಯ ವಿದ್ಯಾರ್ಥಿಸಾತ್ವಿಕ್ ಜಿ.ಪ್ರಥಮ ಸ್ಥಾನವನ್ನು ಗಳಿಸಿದರೆ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ ಮಹೇಶ್‍ಕಜೆ ಹಾಗೂ ದೀಪಿಕಾ ಕಜೆದಂಪತಿಯ ಪುತ್ರಿ, 10ನೇತರಗತಿ ವಿದ್ಯಾರ್ಥಿನಿ ಮಂದಿರಾಕಜೆ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಗಣಿತ ಮಾದರಿ ಸ್ಪರ್ಧೆ ಪಂಜಾಬಿನ ಸರ್ವಹಿತಕಾರ್ಯ ಕೇಶವ ವಿದ್ಯಾನಿಕೇತನ ವಿದ್ಯಾಧಾಮ ಜಲಂಧರದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದ ವಿಜ್ಞಾನ ಪತ್ರವಾಚನ ಸ್ಪರ್ಧೆಉತ್ತರ ಪ್ರದೇಶದ ಮೀರತ್ ಬಾಲೆ ರಾಮ ಬ್ರಿಜಭೂಷಣ ಸರಸ್ವತಿ ಶಿಶುಮಂದಿರದಲ್ಲಿ ಜರಗಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top