ಅಂಬಿಕಾ ವಿದ್ಯಾಲಯದ ಕುವಿರ ವಿಜ್ಞಾನ ವಿಚಾರಗೋಷ್ಟಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಿ.ಬಿ.ಎಸ್. ಇ ವಿದ್ಯಾಲಯದ 9 ನೇ ತರಗತಿಯ ವಿದ್ಯಾರ್ಥಿನಿ ಕುವಿರ ಕೆ. ವಿ. ಇವರು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾದ 2025 - 26 ನೇ ಸಾಲಿನ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 


ಸಂತವಿಕ್ಟರನ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುವಿರ ಅವರು ಕ್ವಾಂಟಮ್ ಯುಗದ ಆರಂಭ - ಸಾಮಥ್ರ್ಯಗಳು ಮತ್ತು ಸವಾಲುಗಳು ಎಂಬ ವಿಷಯವನ್ನು ಮಂಡಿಸಿದ್ದರು. ಇವರು ಕೆಮ್ಮಾಯಿ ನಿವಾಸಿಗಳಾದ ಕರುಣಾಕರ  ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರಿ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top