ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರಿನ ಎಂ ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮಿ ಶೆಣೈ ದಂಪತಿ ಪುತ್ರಿ ಪ್ರತೀಕ್ಷಾ ಯನ್. ಶೆಣೈ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್, 200 ಮೀಟರ್ ಬ್ರೆಸ್ಟ್ ಸ್ಟ್ರೋಕ್‍ಗಳಲ್ಲಿ ಚಿನ್ನ, 4x100 ಫ್ರೀ ಸ್ಟೈಲ್ ರಿಲೇ ಹಾಗೂ 4x100 ಮಿಡ್ಲೇ ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದು ಸಾಧನೆ ಮಾಡಿರುತ್ತಾರೆ. ಇನ್ನೋರ್ವ ವಿದ್ಯಾರ್ಥಿ, ಪುತ್ತೂರಿನ ಡಾ. ದೀಪಕ್ ರೈ ಮತ್ತು ವಜ್ರಾಕ್ಷಿ ಡಿ. ರೈ ದಂಪತಿ ಪುತ್ರ ಪ್ರಥಮ ಪಿಯುಸಿಯ ವಿದ್ಯಾರ್ಥಿ ವರ್ಧಿನ್ ಡಿ. ರೈ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್‍ಗಳಲ್ಲಿ ಚಿನ್ನ, 50 ಮೀಟರ್ ಬಟರ್ ಫ್ಲೈನಲ್ಲಿ ಬೆಳ್ಳಿ, 4x100 ಫ್ರೀ ಸ್ಟೈಲ್‍ನಲ್ಲಿ ಚಿನ್ನ, 4x100 ಮಿಡ್ಲೇ ರಿಲೇ ಯಲ್ಲಿ ಬೆಳ್ಳಿ ಪದಕ ವಿಜೇತರಾಗಿ ಕೀರ್ತಿ ತಂದಿರುತ್ತಾರೆ. ಈ ಇಬ್ಬರೂ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ರರ್ಧೆಗೆ ಆಯ್ಕೆಯಾಗಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ