ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿನಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 56 ಅಂಗನವಾಡಿನ ಕಾರ್ಯಕರ್ತೆ ಹಾಗೂ 221 ಅಂಗನವಾಡಿ ಸಹಾಯಕಿಯರನಗೌರವ ಸೇವೆಗಳ ಹುದ್ದೆಗೆ ಆನ್‍ಲೈನ್‍ನಲ್ಲಿ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ https:karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಮೊದಲ ಹಂತದಲ್ಲಿ ಆನ್‍ಲೈನ್ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಬೇಕು. ಎರಡನೇ ಹಂತದಲ್ಲಿ ಸಹಿ ಹಾಗೂ ಭಾವಚಿತ್ರವನ್ನು ಅಪ್‍ಲೋಡ್ ಮಾಡಬೇಕು. ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಮೂರನೇ ಹಂತದಲ್ಲಿ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಅಪ್‍ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಬೆಳ್ತಂಗಡಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ 08256-295134, ಬಂಟ್ವಾಳ:08255-298562, ಮಂಗಳೂರು(ಗ್ರಾ):0824-2263199, ಮಂಗಳೂರು(ನ):0824-2959809, ಪುತ್ತೂರು: 08251-298788, ಸುಳ್ಯ:7795581349, ವಿಟ್ಲ:08255-238080 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ