ಜೆಪ್ಪು: ಅಂಗನವಾಡಿ ಉದ್ಘಾಟನೆ

Upayuktha
0


ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೆಪ್ಪುವಿನ ಭಾರತ್ ಮೈದಾನದಲ್ಲಿ ನೂತನವಾಗಿ ಸುಮಾರು 7 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು.


ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಸ್ಥಳೀಯ ಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿಯವರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಈ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಲಾಗಿತ್ತು. ಇದೀಗ ಕಟ್ಟಡವು ಲೋಕಾರ್ಪಣೆಗೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಿದ ಪ್ರೇಮಾನಂದ ಶೆಟ್ಟಿಯವರಿಗೆ ವಿಶೇಷ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಮಕ್ಕಳ ಬಾಲ್ಯದ ಶಿಕ್ಷಣಕ್ಕಾಗಿ ಕ್ಷೇತ್ರದಲ್ಲಿ ಅಗತ್ಯವಿರುವೆಡೆ ಬೇಡಿಕೆಗನುಸಾರವಾಗಿ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದರು. 


ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಭಾನುಮತಿ, ದೀಪಕ್ ಪೈ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ರೇಷ್ಮಾ, ಅಂಗನವಾಡಿ ಕಾರ್ಯಕರ್ತೆ ರೇಖಾ, ಅಂಬಾ ಮಹೇಶ್ವರಿ ಟ್ರಸ್ಟ್ ನ ಅಧ್ಯಕ್ಷರಾದ ಸೀತಾರಾಮ್, ಪ್ರಕಾಶ್, ಯಶವಂತ್, ರಾಜೇಂದ್ರ, ನವೀನ್ ಕಿಲ್ಲೆ, ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top