ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪಾಯ್ಸ್ ರವರನ್ನು ಅಭಿನಂದಿಸಲಾಯಿತು. ಇವರು ನಗರದ ಬಿಕರ್ನಕಟ್ಟೆಯ ನಾಲ್ಯಪದವು ಶಾಲೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ, ಪ್ರಸ್ತುತ ಈಗ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಈ ಬಾರಿ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿರುತ್ತದೆ.
ಈ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಂಡಲದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ, ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ರಾವ್, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾದ ಪ್ರಭಾರಿ ಶ್ರೀಮತಿ ಸಂಧ್ಯಾ ವೆಂಕಟೇಶ್, ಆ ಭಾಗದ ನಿಕಟಪೂರ್ವ ಮನಪಾ ಸದಸ್ಯರಾದ ಕಿಶೋರ್ ಕೊಟ್ಟಾರಿ, ಪೂರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿಚಂದ್ರ, ಮಂಡಲದ ಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾದ ಪ್ರಭಾರಿ ಮಂಗಳಾ ಆಚಾರ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಮಲಾಕ್ಷಿ ಗಂಗಾಧರ್, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಸವಿತಾ ರೈ, ಜ್ಯೋತಿ ಯಲಬುರ್ಗಿ, ಲೀಲಾವತಿ ಪ್ರಕಾಶ್, ಯಶೋದಾ ಗಟ್ಟಿ, ಮಾಲತಿ ಅರುಣ್, ವೀಣಾ ಕುಲಾಲ್, ಅಮಿತಾ ಹಾಗೂ ಪೂರ್ವ ಶಕ್ತಿ ಕೇಂದ್ರದ ಮಹಿಳಾ ಪ್ರಮುಖ್ ಚೇತನ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


