ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಳ್ಳಾರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ-2025 ಕಾರ್ಯಕ್ರಮವನ್ನು ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ ಉದ್ಘಾಟಿಸಿದರು.
ಬಳಿಕ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಹಾಗೂ ಬೌದ್ಧಿಕವಾಗಿ ಸದೃಡರಾಗುತ್ತೇವೆ. ಆದ್ದರಿಂದ ಇಂದಿನ ಯುವಪೀಳಿಗೆ ಮೊಬೈಲ್ ಗೇಮ್ ಗಳಿಂದ ಹೊರ ಬಂದು ಮೈದಾನದ ಕ್ರೀಡೆಗಳಿಗೆ ಒಲವು ತೋರಿಸಬೇಕು. ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಚಿದಾನಂದಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ ಗ್ರೇಸಿ, ಕ್ರೀಡಾ ಪಟುಗಳಾದ ಶಮೀನಾ, ಸೈಯದ್ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ