ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ ಕಾರಭಾರಿ ಅವರು ಮಂಗಳವಾರ ಉಜಿರೆಯ ಸಿದ್ಧವನ ರುಡ್ ಸೆಟ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು.
ರುಡ್‌ಸೆಟ್ ಸಂಸ್ಥೆಗಳ ತರಬೇತಿಯಲ್ಲಿ ಪ್ರಾಯೋಗಿಕ ತರಬೇತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದರಿಂದ ಶಿಬಿರಾರ್ಥಿಗಳಿಗೆ ಹೆಚ್ಚು ಕೌಶಲ್ಯ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಸ್ವಂತ ಉದ್ಯೋಗ ಪ್ರಾರಂಭಿಸಲು ಅನುಕೂಲವಾಗುತ್ತದೆ. ಇಲ್ಲಿನ ತರಬೇತಿ ಪಡೆದ ನಂತರವೂ ಹೊಸ ಹೊಸ ತಂತ್ರಜ್ಞಾನಗಳನ್ನು ನವೀಕರಿಸಿಕೊಳ್ಳಿ, ಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿ ಹಾಗೂ ಉದ್ಯಮಿಗಳು ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಂಡಾಗ ಲಾಭ ನಷ್ಟಗಳ ವಿವರ ದೊರೆಯುತ್ತದೆ ಎಂದು ಹೇಳಿದರು. ತರಬೇತಿ ಪಡೆಯುತ್ತಿರುವ ಎಲ್ಲರಿಗೂ ಶುಭ ಹಾರೈಸಿದರು.
ನಂತರ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ರುಡ್ ಸೆಟ್ ಸಂಸ್ಥೆಯ ಜಿಲ್ಲಾ ಮಟ್ಟದ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸಿ, ಸಲಹೆಗಳನ್ನು ನೀಡಿ ಸಹಕರಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಗ್ರಣಿ ಬ್ಯಾಂಕಿನ ಮುಖ್ಯ ಪ್ರಬಂಧಕಿ ಶ್ರೀಮತಿ ಕವಿತಾ ಎನ್ ಶೆಟ್ಟಿ ಹಾಗೂ ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಂಗೀತಾ ಕರ್ತಾ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್ ಸತೀಶ್ಚಂದ್ರ, ಉಜಿರೆ ಕೆನರಾ ಬ್ಯಾಂಕಿನ ಹಿರಿಯ ಪ್ರಬಂಧಕ ಜಯಂತ ಅಡಿಗ ಮತ್ತು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಕುಮಾರ ಬಿ.ಪಿ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ, ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಉಪನ್ಯಾಸಕ ಕೆ. ಕರುಣಾಕರ ಜೈನ್ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


