ಉಡುಪಿ: ಮಹಾತ್ಮ ಗಾಂಧಿ ಮೆಮೊರಿಯಲ್ ಈವಿನಿಂಗ್ ಕಾಲೇಜಿನಲ್ಲಿ “Campus to Capital – Invest Right, Live Bright” ಎಂಬ ಹೂಡಿಕೆ ಜಾಗೃತಿ ಕಾರ್ಯಕ್ರಮವು ಬುಧವಾರ (ಸೆ.3) ಬೆಳಿಗ್ಗೆ 11.00 ಗಂಟೆಗೆ ಕಾಲೇಜಿನ ಟಿ. ಮೋಹನದಾಸ್ ಪೈ ಪ್ಲಾಟಿನಂ ಜೂಬಿಲಿ ಬ್ಲಾಕ್‌ನ ಆಡಿಯಟೋರಿಯಂನಲ್ಲಿ ನಡೆಯಿತು.
ಈ ವಿಶೇಷ ಕಾರ್ಯಕ್ರಮದಲ್ಲಿ ಬುಲ್‌ಫೋರ್ಸ್ ಸಂಸ್ಥೆಯ ಅಸೋಸಿಯೇಟ್ ಡೈರೆಕ್ಟರ್ ವೀಣಾಧರ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹೂಡಿಕೆ ಕುರಿತಾಗಿ ಅಗತ್ಯವಾದ ಜ್ಞಾನ, ಸರಿಯಾದ ಹೂಡಿಕೆ ವಿಧಾನಗಳು ಹಾಗೂ ಭವಿಷ್ಯದ ಆರ್ಥಿಕ ಭದ್ರತೆಯ ಬಗ್ಗೆ ಮಾರ್ಗದರ್ಶನ ನೀಡಿದರು. “ವಿದ್ಯಾರ್ಥಿ ಜೀವನದಲ್ಲಿಯೇ ಹಣಕಾಸಿನ ಬಗ್ಗೆ ಅರಿವು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ. ಸರಿಯಾದ ಸಮಯದಲ್ಲಿ ಸರಿಯಾದ ಹೂಡಿಕೆ ಮಾಡಿದರೆ ಭವಿಷ್ಯದಲ್ಲಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು” ಎಂಬ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನೀಡಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್ ನಾಯಕ್ ಉಪಸ್ಥಿತರಿದ್ದರು. ದಿಶಾನ್, ದ್ವಿತೀಯ ಬಿಕಾಂ ಅತಿಥಿ ಪರಿಚಯ ಮಾಡಿ,ಕಾರ್ಯಕ್ರಮವನ್ನು ಮೇಘನಾ, ಪ್ರಥಮ ಬಿಕಾಂ ನಿರೂಪಿಸಿದರು .
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ