ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನಕ್ಕೆ ದ.ಕ ಜಿಲ್ಲಾ ಸಾಹಿತ್ಯ ಪರಿಷತ್ತು ಸಂತಾಪ

Upayuktha
0


ಮಂಗಳೂರು: ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪುರಸ್ಕೃತ, ಎಸ್.ಎಲ್ ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲಿ ನಿಧನರಾಗಿದ್ದು, ನಾಡಿನ ಸಾಹಿತ್ಯ ಪ್ರೇಮಿಗಳಿಗೆ ದೊಡ್ಡ ನಷ್ಟವಾಗಿದೆ. ಅವರ ಪ್ರಮುಖ ಕಾದಂಬರಿಗಳಾದ ವಂಶವೃಕ್ಷ, ದಾಟು, ತಂತು ಮುಂತಾದವು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿವೆ.


ಸಾಹಿತ್ಯ ಲೋಕದ ಅವರ ಕೊಡುಗೆಗೆ 2023ನೇ ಸಾಲಿನಲ್ಲಿ ಭಾರತ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಅವರು 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.


ಎಸ್. ಎಲ್ ಭೈರಪ್ಪ (94) ಇವರ ನಿಧನ ಅತೀವ ದುಃಖ ತಂದಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top