ದ.ಕ. ಹಾಲು ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ; ಶೇ. 25 ಬೋನಸ್, ಶೇ.15 ಡಿವಿಡೆಂಡ್

Upayuktha
0


ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು 2024-25ನೇ ಸಾಲಿನಲ್ಲಿ ಒಟ್ಟು ರೂ. 1173.70 ಕೋಟಿಯ ವಹಿವಾಟು ಮಾಡಿ ರೂ.12.79 ಕೋಟಿ ನಿವ್ವಳ ಲಾಭ ಗಳಿಸಿದ್ದು ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ. 5.84% ರಷ್ಟು ಪ್ರಗತಿ ಸಾಧಿಸಿದೆ. ಒಕ್ಕೂಟವು ಗುಣಮಟ್ಟದ ಹಾಲಿನ ಸಂಗ್ರಹಣೆಯಲ್ಲಿ ರಾಜ್ಯದಲ್ಲಿ ಅಗ್ರ ಸ್ಥಾನದಲ್ಲಿದೆ. ರೈತರಿಗೆ ಪ್ರತೀ ಲೀಟರ್ ಹಾಲಿಗೆ ಅತೀ ಹೆಚ್ಚಿನ ದರ ಹಾಗೂ 1.5 ರೂ. ಪ್ರೋತ್ಸಾಹಧನ ಒಕ್ಕೂಟದಿಂದ ನೀಡುವುದರೊಂದಿಗೆ ವಿವಿಧ ಅನುದಾನಗಳ ರೂಪದಲ್ಲಿ ಪ್ರತಿ ಕೆ.ಜಿ. ಹಾಲಿಗೆ ರೂ. 0.91 ರಂತೆ ರೈತರಿಗೆ ನೀಡುತ್ತಿರುವ ಏಕೈಕ ಒಕ್ಕೂಟವಾಗಿರುತ್ತದೆ.


ಆದರೆ ದ.ಕ. ಹಾಗೂ ಉಡುಪಿ ಜಿಲ್ಲೆ ಕರಾವಳಿ ಪ್ರದೇಶವಾದ್ದರಿಂದ ಹಾಲಿನ ಉತ್ಪಾದನಾ ವೆಚ್ಚ ಗಣನೀಯವಾಗಿ ಹೆಚ್ಚಿದ್ದು, ಹಾಲು ಉತ್ಪಾದನೆಯನ್ನು ಪ್ರೋತ್ಸಾಹಿಸಲು ಉಭಯ ಜಿಲ್ಲೆಗಳಿಗೆ  ಪ್ರತಿ ಲೀಟರ್ ಹಾಲಿನ ಮಾರಾಟ ದರವನ್ನು ಕನಿಷ್ಠ 3 ರಂತೆ ಪ್ರತ್ಯೇಕವಾಗಿ ನಿಗದಿಪಡಿಸಿ ಹೆಚ್ಚುವರಿ ಮಾರಾಟ ದರವನ್ನು ಹಾಲು ಉತ್ಪಾದಕರಿಗೆ ನೇರವಾಗಿ ವರ್ಗಾಯಿಸಿದ್ದಲ್ಲಿ ಅನುಕೂಲವಾಗುವುದೆಂದು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಹೇಳಿದರು.


ಅವರು  ಕುಲಶೇಖರ ಕೋರ್ಡೆಲ್ ಹಾಲ್‍ನಲ್ಲಿ ಶನಿವಾರ ನಡೆದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ  ಮಾತನಾಡಿದರು.


ಕಡಿಮೆ ವೆಚ್ಚದಲ್ಲಿ ಅಧಿಕ ಹಾಲು ಉತ್ಪಾದನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಸಿರು ಮೇವಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಒಕ್ಕೂಟದ ವ್ಯಾಪ್ತಿಯ ಹತ್ತು ಹಾಲು ಉತ್ಪಾದಕರ ಸಂಘದ ವ್ಯಾಪ್ತಿಯಲ್ಲಿ ಎರಡು ಎಕರೆ ಜಾಗದಲ್ಲಿ ಮೇವಿನ ಅಭಿವೃದ್ಧಿಗೆ ರೂ.20 ಲಕ್ಷ ಅನುದಾನ ನೀಡುವುದರ ಮೂಲಕ ಹಸಿರು ಮೇವಿನ ಅಭಿವೃದ್ಧಿ ಹಾಗೂ ಹೈನುಗಾರಿಕೆಗೆ ಉತ್ತೇಜಿಸಲು ಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷರು ತಿಳಿಸಿದರು.


2024-25ನೇ ಸಾಲಿನಲ್ಲಿ ಸಂಘಗಳು ಒಕ್ಕೂಟಕ್ಕೆ ಹಾಲು ಸರಬರಾಜು ಮಾಡಿದ ಪ್ರಮಣಕ್ಕನುಗುಣವಾಗಿ ಶೇ.    25 ಬೋನಸ್ಸನ್ನು ಹಾಗೂ ಶೇ.15 ರಂತೆ ಡಿವಿಡೆಂಡ್ ನೀಡಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಒಟ್ಟು ಬೋನಸ್ ರೂ.2.33 ಕೋಟಿ ಹಾಗೂ ಷೇರು ಡಿವಿಡೆಂಟ್ ರೂ.3.04 ಕೋಟಿ ಒಟ್ಟು ರೂ. 5.37 ಕೋಟಿಗಳನ್ನು ಸಂಘಗಳಿಗೆ ವಿತರಿಸಲು ತೀರ್ಮಾನಿಸಲಾಯಿತು.


ವರದಿ ಸಾಲಿನಲ್ಲಿ ಒಕ್ಕೂಟ/ಜಿಲ್ಲೆಯ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರ ಸಂಘ/ ಮಹಿಳಾ ಸಹಕಾರ ಸಂಘ/ ಉತ್ತಮ ಹೈನುಗಾರರು/ಉತ್ತಮ ಗುಣಮಟ್ಟದ ಸಂಘಗಳು ಮತ್ತು ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತರನ್ನು ಹಾಗೂ SSಐಅ ಹಾಗೂ ಪಿ.ಯು.ಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಹಾಲು ಉತ್ಪಾದಕರ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.


• ಒಕ್ಕೂಟದ ಅತ್ಯುತ್ತಮ ಸಂಘ –ಉಡುಪಿ ಜಿಲ್ಲೆಯ ಹಾಳೆಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘ

• ಜಿಲ್ಲಾವಾರು ಉತ್ತಮ ಸಂಘ- ದ.ಕ ಜಿಲ್ಲೆಯ ಗುಂಡೂರಿ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಉಡುಪಿ ಜಿಲ್ಲೆಯ ಕಾಂತಾವರ ಹಾಲು ಉತ್ಪಾದಕರ ಸಹಕಾರ ಸಂಘ

• ಒಕ್ಕೂಟದ ಉತ್ತಮ ಮಹಿಳಾ ಸಂಘ – ದ.ಕ ಜಿಲ್ಲೆಯ ರಾಮನಗರ ಮತ್ತು ಉಡುಪಿ ಜಿಲ್ಲೆಯ ಆರೂರು ಮಹಿಳಾ ಸಹಕಾರ ಸಂಘ

• ಜಿಲ್ಲಾವಾರು ಉತ್ತಮ ಬಿಎಂಸಿ - ದ.ಕ ಜಿಲ್ಲೆಯ ಕುಕ್ಕೇಡಿ ಮತ್ತು ಉಡುಪಿ ಜಿಲ್ಲೆಯ ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘ

• ಒಕ್ಕೂಟದ ಉತ್ತಮ ಹೈನುಗಾರರು: ಮೇಕೋಡು ಹಾಲು ಉತ್ಪಾದಕರ ಸಂಘದ ಎಸ್. ಪ್ರಕಾಶ್ಚಂದ್ರ ಶೆಟ್ಟಿÀ, ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಂಘದ ಸಾವಿತ್ರಿ ಭಟ್ ಹಾಗೂ ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘದ ಡಾ. ದೇವಿಪ್ರಸಾದ್ ಶೆಟ್ಟಿ.


2024-25ರ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷ  ಉದಯ ಎಸ್.ಕೋಟ್ಯಾನ್ ಹಾಗೂ ನಿರ್ದೇಶಕರಾದ ಸುಚರಿತ ಶೆಟ್ಟಿ, ಎಸ್.ಬಿ. ಜಯರಾಮ ರೈ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎನ್. ಮಂಜಯ್ಯ ಶೆಟ್ಟಿ, ಬಿ. ಸುಧಾಕರ ರೈ, ಸವಿತ ಎನ್. ಶೆಟ್ಟಿ, ಎಂ. ಸುಧಾಕರ ಶೆಟ್ಟಿ, ಕೆ. ಚಂದ್ರಶೇಖರ ರಾವ್, ಕೆ. ಶಿವಮೂರ್ತಿ, ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ನಂದರಾಮ್ ರೈ, ಮಮತಾ ಆರ್ ಶೆಟ್ಟಿ. ಎಚ್. ಪ್ರಭಾಕರ, ಭರತ್ ಎನ್ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್. ರಮೇಶ್, ಡಾ. ಅರುಣ್‍ಕುಮಾರ್ ಶೆಟ್ಟಿ, ಉಪ ನಿರ್ದೇಶಕರು(ಪ.ಸಂ.) ಹಾಗೂ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಹಾಜರಿದ್ದರು.


ಒಕ್ಕೂಟದ ಉಪಾಧ್ಯಕ್ಷ ಉದಯ್ ಎಸ್. ಕೋಟ್ಯಾನ್ ಸ್ವಾಗತಿಸಿ, ವ್ಯವಸ್ಥಾಪಕ ನಿರ್ದೇಶಕ ವಿವೇಕ್. ಡಿ. ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top