ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರ ಚತುರ್ದಾನಗಳ ಕುರಿತು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ 'ದಾನ ಪುರುಷಾರ್ಥ' ನಾಮಾಂಕಿತ ಭಿತ್ತಿಪತ್ರಿಕೆಯನ್ನು ಧರ್ಮಸ್ಥಳ ಕ್ಷೇತ್ರದಲ್ಲಿ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರು ಅನಾವರಣಗೊಳಿಸಿ ಶುಭ ಹಾರೈಸಿದರು.
ಭಿತ್ತಿಪತ್ರಿಕೆಯನ್ನು ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳನ್ನು ಹರಸಿದರು ಹಾಗೂ ಮಂಜುಶ್ರೀ ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲು ಅನುವು ಮಾಡಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಪಪೂ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್, ಉಪಪ್ರಾಚಾರ್ಯ ಡಾ. ರಾಜೇಶ್ ಬಿ., ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಭಿತ್ತಿಪತ್ರಿಕೆಯನ್ನು ರಚಿಸಿದ ವಿದ್ಯಾರ್ಥಿಗಳಾದ ಸಂಕೀರ್ತನಾ, ಅಮೂಲ್ಯ ಪ್ರಭು, ಧೃತಿ ಪಿ ಶೆಟ್ಟಿ ಮತ್ತು ಕ್ಷಿಪ್ರಪ್ರಸಾದ ಇವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

