ದಸರಾ ಪ್ರತಿ ಮನೆಮನಗಳ ಹಬ್ಬ: ಡಾ. ಪ್ರವೀಣ್ ಪದ್ಯಾಣ

Upayuktha
0


ಕಾಸರಗೋಡು: ದಸರಾ ಕೇವಲ ಧಾರ್ಮಿಕ ಹಬ್ಬವಲ್ಲ. ಅದು ನಾಡಿನ ಪ್ರತಿ ಮನೆಮನಗಳ ಸಂಭ್ರಮದ ಹಬ್ಬ. ದಸರಾ ನಾಡುನುಡಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕಾಸರಗೋಡು ಕರ್ನಾಟಕದಿಂದ ಹೊರಗಿದ್ದರೂ ಕೂಡ ಕನ್ನಡ ನಾಡಿನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ ಎಂದು ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ಪ್ರವೀಣ್ ಪದ್ಯಾಣ ಅವರು ನುಡಿದರು.


ಅವರು ಕಾಸರಗೋಡು ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ಕಾಸರಗೋಡು ಕನ್ನಡ ಬಳಗ ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಸ್ನೇಹರಂಗ ಮತ್ತು ಕನ್ನಡ ಸಂಘದ ಸಹಕಾರದೊಂದಿಗೆ ಆಯೋಜಿಸಿದ್ದ ದಸರಾ ನಾಡಹಬ್ಬ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಉಪನ್ಯಾಸ ನೀಡಿದರು.


ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಜಾತ ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಇದೇ ಸಂದರ್ಭದಲ್ಲಿ ಜರಗಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪುಂಡೂರು ಲಕ್ಷ್ಮೀನಾರಾಯಣ ಪುಣಿಂಚತ್ತಾಯ, ಪುಂಡೂರು ದಾಮೋದರ ಪುಣಿಂಚತ್ತಾಯ ಮತ್ತು ದೇವಮ್ಮ ಟೀಚರ್ ದತ್ತಿನಿಧಿ ಪುರಸ್ಕಾರಗಳ ವಿತರಣೆಯೂ ನಡೆಯಿತು. ಡಾ. ವೇದಾವತಿ ಎಸ್. ಬಹುಮಾನ ವಿತರಣೆ ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ. ಆಶಲತಾ ಸಿ.ಕೆ. ಸ್ವಾಗತಿಸಿದರು. ಡಾ. ಸವಿತ ಬಿ. ವಂದಿಸಿದರು. ಡಾ. ಬಾಲಕೃಷ್ಣ ಬಿ.ಎಂ ಹೊಸಂಗಡಿ ಕಾರ್ಯಕ್ರಮ ನಿರೂಪಿಸಿದರು. ನಂತರ ಸ್ನೇಹರಂಗದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top