ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐ ಕ್ಯೂ ಎಸಿ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಆಶ್ರಯದಲ್ಲಿ ನಾಡಹಬ್ಬ ದಸರಾ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವ್ಕರ್, ಕನ್ನಡ ನಾಡು ನುಡಿ ಸಂಸ್ಕೃತಿಯ ಹಾಗೂ ಅಭಿಮಾನದ ಸಂಕೇತವಾಗಿರುವ ದಸರಾ ಆಚರಣೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಾ ನಮ್ಮ ಮಾತೃಭಾಷೆ ಸಂಸ್ಕೃತಿಯ ಅರಿವು ಯುವ ಜನತೆಯಲ್ಲಿ ಅವಶ್ಯಕವೆಂದರು. ಇದೇ ಸಂದರ್ಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಸಮಾಜ ಸೇವಕರಾದ ರವಿ ಕಟಪಾಡಿ ಹಾಗೂ ಭರತನಾಟ್ಯದಲ್ಲಿ ಸತತ 216 ಗಂಟೆಗಳ ಕಾಲ ನತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆಗೊಂಡ ವಿದುಷಿ ದೀಕ್ಷಾ ವಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಐಕ್ಯೂ ಎಸಿ ಸಂಚಾಲಕ ಡಾ.ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸಂದೇಶ, ರಾಜ್ ಕುಮಾರ್, ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್ ಭಟ್, ದೈಹಿಕ ಶಿಕ್ಷಣ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ, ಕಾರ್ಯಕ್ರಮ ಸಂಘಟಿಸಿದ ಸಾಂಸ್ಕೃತಿಕ ಸಂಘದ ಸಂಚಾಲಕ ಕೃಷ್ಣ ಸಾಸ್ತಾನ, ಬೋಧಕ - ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನೆರೆದಿರುವ ಎಲ್ಲರಿಗೂ ದೀಕ್ಷಾ ಸ್ವಾಗತ ಕೋರಿದರೆ ಯಕ್ಷ ವಂದಿಸಿದರು, ಶ್ರೀನಿಧಿ ಮತ್ತು ಅಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ಭಾಷೆ- ಸಂಸ್ಕೃತಿಯನ್ನು ಪ್ರತಿನಿಧಿಸುವ ವಿವಿಧ ಶಾಸ್ತ್ರೀಯ ಹಾಗೂ ಜನಪದ ನೃತ್ಯ ವೈಭವ ಜರಗಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


